HomeKarnatakaBIG NEWS: ಉಡುಪಿ ಗ್ಯಾಂಗ್ ವಾರ್ ಪ್ರಕರಣ; ಮತ್ತೆ ಮೂವರು ಆರೋಪಿಗಳು ಅರೆಸ್ಟ್

BIG NEWS: ಉಡುಪಿ ಗ್ಯಾಂಗ್ ವಾರ್ ಪ್ರಕರಣ; ಮತ್ತೆ ಮೂವರು ಆರೋಪಿಗಳು ಅರೆಸ್ಟ್

ಉಡುಪಿ: ಉಡುಪಿಯಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗರುಡಾ ಗ್ಯಾಂಗ್ ನ ಮೂವರನ್ನು ಬಂಧಿಸಲಾಗಿದ್ದು, ಮಜೀದ್, ಅಲ್ಫಾಜ್, ಶರೀಫ್ ಬಂಧಿತ ಆರೋಪಿಗಳು. ಪ್ರಕರಣ ಸಂಬಂಧ ನಿನ್ನೆಯಷ್ಟೇ ಆಶಿಕ್, ರಾಕೀಬ್, ಸಕ್ಲೈನ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಮೂವರನ್ನು ಬಂಧಿಸಿದ್ದಾರೆ.

ಮೇ 18ರಂದು ಉಡುಪಿಯ ಕುಂಜಿಬೆಟ್ಟುವಿನಲ್ಲಿ ತಡರಾತ್ರಿ ನಡುರಸ್ತೆಯಲ್ಲಿಯೇ ಕಾರುಗಳನ್ನು ಪರಸ್ಪರ ಗುದ್ದಿಕೊಂಡು ಮಾರಾಮಾರಿ ನಡೆಸಿದ್ದರು. ಈ ಗ್ಯಾಂಗ್ ವಾರ್ ಗೆ ಸಂಬಂಧಿಸಿದಂತೆ ಇದೀಗ ಒಟ್ಟು 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular