HomeKarnatakaಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಅವಘಡ: ಸ್ವಾಮೀಜಿಗಳ ಕೈಯಿಂದ ಕೆಳಗೆ ಬಿದ್ದು ಭಗ್ನಗೊಂಡ ಶ್ರೀಕೃಷ್ಣನ ಉತ್ಸವ...

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಅವಘಡ: ಸ್ವಾಮೀಜಿಗಳ ಕೈಯಿಂದ ಕೆಳಗೆ ಬಿದ್ದು ಭಗ್ನಗೊಂಡ ಶ್ರೀಕೃಷ್ಣನ ಉತ್ಸವ ಮೂರ್ತಿ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಉತ್ಸವದ ವೇಳೆ ಅವಘಡವೊಂದು ಸಂಭವಿಸಿರುವ ಘಟನೆ ನಡೆದಿದೆ. ರಥೋತ್ಸವದ ವೇಳೆ ಮಣ್ಣಿನ ಕೃಷ್ಣ ಮೂರ್ತಿ ಸ್ವಾಮೀಜಿಗಳ ಕೈಯಿಂದ ಜಾರಿ ಬಿದ್ದು ಭಗ್ನಗೊಂಡಿದೆ.

ಚಾತುರ್ಮಾಸದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ೫ರಂದು ಕೃಷ್ಣ ಮಠದಲ್ಲಿ ನೆರೆದಿದ್ದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆದ ವಿಟ್ಲಪಿಂಡಿ ರಥೋತ್ಸವದ ವೇಳೆ ಈ ಘಟನೆ ನಡೆದಿದೆ.ರಥಾರೋಹಣ ಸಂದರ್ಭದಲ್ಲಿ ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿಯವರ ಕೈಯಿಂದ ರಥದಲ್ಲಿ ರಥಾರೂಢವಾಗಿದ್ದ ಕೃಷ್ಣನ ಮಣ್ಣಿನ ಉತ್ಸವ ಮೂರ್ತಿ ಆಕಸ್ಮಿಕವಾಗಿ ಕೆಳಗೆ ಬಿದ್ದು ಭಗ್ನಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ಸವದ ಸಂದರ್ಭದಲ್ಲಿ ಈ ಅನಿರೀಕ್ಷಿತ ಘಟನೆ ನಡೆದಿರುವುದು ನೆರೆದಿದ್ದ ಅಪಾರ ಸಂಖ್ಯೆಯ ಕೃಷ್ಣ ಭಕ್ತರಲ್ಲಿ ತೀವ್ರ ಆತಂಕವನ್ನು ಮೂಡಿಸಿದೆ.

ಉಡುಪಿ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ವಿಟ್ಲಪಿಂಡಿ ಮಹೋತ್ಸವ ಅದ್ಧೂರಿಯಾಗಿ ನಡೆಯಿತು. ಚಾತುರ್ಮಾಸದ ಹಿನ್ನೆಲೆ ಪ್ರತಿಷ್ಠಾಪಿಸಲಾಗಿದ್ದ ಕೃಷ್ಣನ ಮಣ್ಣಿನ ಮೂರ್ತಿಯನ್ನು ಚಿನ್ನದ ರಥದಲ್ಲಿ ರಥಾರೂಢಗೊಳಿಸಿ, ರಥಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು.

ರಥೋತ್ಸವದ ಬಳಿಕ ಕೃಷ್ಣನ ಮಣ್ಣಿನ ಮೂರ್ತಿಯನ್ನು ರಥದಿಂದ ಇಳಿಸಿ, ಮಧ್ವ ಸರೋವರದಲ್ಲಿ ವಿಸರ್ಜನೆಗೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಪರ್ಯಾಯ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಗಳ ಕೈಯಿಂದ ಕೃಷ್ಣನ ಮೂರ್ತಿ ಆಕಸ್ಮಿಕವಾಗಿ ಜಾರಿ ಕೆಳಗೆ ಬಿದ್ದಿದೆ. ಕೆಳಗೆ ಬಿದ್ದ ಹೊಡೆತಕ್ಕೆ ಮಣ್ಣಿನಿಂದ ಮಾಡಲಾಗಿದ್ದ ಕೃಷ್ಣನ ಮೂರ್ತಿ ಭಗ್ನವಾಗಿದೆ.

ಪ್ರತಿವರ್ಷದಂತೆ ಈ ಬಾರಿಯೂ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನಡೆದ ವಿಟ್ಲಪಿಂಡಿ ಉತ್ಸವದ ಅಂತಿಮ ಹಂತದಲ್ಲಿ ನಡೆದ ಈ ಘಟನೆ ಆತಂಕಕ್ಕೆ ಕಾರಣವಾಗಿದೆ.

ದೆಹಲಿಯಲ್ಲಿ ಪಿಜಿ ಕಟ್ಟಡ ಕುಸಿದು ದುರಂತ: ಓರ್ವನ ರಕ್ಷಣೆ; ಅವಶೇಷಗಳಡಿ ಹಲವು ವಿದ್ಯಾರ್ಥಿಗಳು ಸಿಲುಕಿರುವ ಶಂಕೆ

ನವದೆಹಲಿ: ನೈಋತ್ಯ ದೆಹಲಿಯಲ್ಲಿ ಪಿಜಿ ಕಟ್ಟಡ ಕುಸಿದು ಬಿದ್ದು ದುರಂತ ಸಂಭವಿಸಿದ್ದು, ಅವಶೇಷಗಳ ಅಡಿಯಲ್ಲಿ ಹಲವು ವಿದ್ಯಾರ್ಥಿಗಳು ಸಿಕ್ಲುಕಿರುವ ಶಂಕೆ ವ್ಯಕ್ತವಾಗಿದೆ.

ನೈಋತ್ಯ ದೆಹಲಿಯ ಸತ್ಯನಿಕೇತನ ಬಾಯ್ಸ್ ಪಿಜಿಯಲ್ಲಿ ಈ ಘಟನೆ ನಡೆದಿದೆ. ದೆಹಲಿ ವಿವಿ ಸೌತ್ ಕ್ಯಾಂಪಸ್ ಸಮೀಪದ ಪಿಜಿ ಇದಾಗಿದ್ದು, ಇಂದು ಮಧ್ಯಾಹ್ನ ಪಿಜಿ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಓರ್ವ ವ್ಯಕ್ತಿಯನ್ನು ರಕ್ಷಿಸಿ ಹೊರತೆಗೆಯಲಾಗಿದೆ. ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಗಿದೆ.

NSUI, AISA ವಿದ್ಯಾರ್ಥಿ ಸಂಘಟನೆಗಳಿಂದ ರಕ್ಷಣ ಅಕಾರ್ಯಾಚರಣೆ ನಡೆಯುತ್ತಿದೆ. ೧೨ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಪೊಲೀಸ್ ಸಿಬ್ಬಂದಿಗಳು ಆಗಮಿಸಿದ್ದಾರೆ. ರಕ್ಷಣಾ ತಂಡಗಳಿಂದ ರಕ್ಷಣಾಕಾರ್ಯಾಚರಣೆ ನಡೆಯುತ್ತಿದೆ.

ದೆಹಲಿ ವಿಶ್ವ ವಿದ್ಯಾಲಯ ಬಳಿಯ ಪಿಜಿ ಕಟ್ಟಡ ಇದಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ ಪಿಜಿಯಲ್ಲಿ ವಾಸವಾಗಿದ್ದರು ಎಂದು ತಿಳಿದುನಂದಿದೆ.

ಸದ್ಯದ ಮಾಹಿತಿ ಪ್ರಕಾರ ಈ ಪಿಜಿ ಕಟ್ಟಡ ಆನಂದ್ ಬನ್ಸಾಲ್ ಎಂಬುವವರಿಗೆ ಸೇರಿದ ಕಟ್ಟಡ ಎಂದು ತಿಳಿದುಬಂದಿದೆ. ಕಟ್ಟಡ ಕುಸಿದ ವೇಳೆ 50 ಯುವಕರು ಈ ಕಟ್ಟಡದಲ್ಲಿ ಇದ್ದರು. 70 ಹಾಸಿಗೆಗಳಿರುವ ಪಿಜಿ ಕಟ್ಟಡ ಇದಾಗಿದೆ.

ದುರಂತದ ಬಗ್ಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಲೆಫ್ಟಿನೆಂಟ್ ಗವರ್ನರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸುವಂತೆ ಸೂಚನೆ ನೀಡಿದ್ದಾರೆ.

ದೆಹಲಿಯಲ್ಲಿ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಹಳೆ ಕಟ್ಟಡವಾಗಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular