HomeKarnatakaBREAKING NEWS: ಊಟಕ್ಕೆ ಕುಳಿತಿದ್ದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

BREAKING NEWS: ಊಟಕ್ಕೆ ಕುಳಿತಿದ್ದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಉಡುಪಿ: ಮನೆಯಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘೋರ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೃಷ್ಣ (36) ಕೊಲೆಯಾದ ದುರ್ದೈವಿ. ಕೊಲೆಯಾಗಿರುವ ಕೃಷ್ಣ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ಮಣಿಪಾಲದಲ್ಲಿ ಕೆಲಸ ಮಡಿಕೊಂಡು ಜೀವನ ಸಾಗಿಸುತ್ತಿದ್ದರು. ನಿನ್ನೆ ರಾತ್ರಿ 9:30ರ ಸುಮಾರಿಗೆ ಮನೆಯಲ್ಲಿ ಊಟ ಮಾಡುತ್ತಿದ್ದ ಕೃಷ್ಣ ಅವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಊಟಕ್ಕೆ ಕುಳಿತಿದ್ದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಹತ್ಯೆಗೈದು ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. ಘಾಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀದಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular