HomeKarnatakaನಾಲ್ವರ ಹತ್ಯೆಗೈದ ಹಂತಕ ಇಂದು ಉಡುಪಿಗೆ: ಏಕಮುಖ ಪ್ರೀತಿಯಿಂದ ಕೃತ್ಯ ಶಂಕೆ

ನಾಲ್ವರ ಹತ್ಯೆಗೈದ ಹಂತಕ ಇಂದು ಉಡುಪಿಗೆ: ಏಕಮುಖ ಪ್ರೀತಿಯಿಂದ ಕೃತ್ಯ ಶಂಕೆ

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿಯನ್ನು ಇಂದು ಉಡುಪಿಗೆ ಪೊಲೀಸರು ಕರೆದುಕೊಂಡು ಬರಲಿದ್ದಾರೆ.

ಪ್ರವೀಣ್ ಅರುಣ್ ಚೌಗಲೆಯನ್ನು ನಿನ್ನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಲಾಗಿತ್ತು. ತನ್ನ ಸಂಬಂಧಿಯ ಮನೆಯಲ್ಲಿ ತಲೆಮರೆಸಿಕೊಂಡಿದ್ದ ಪ್ರವೀಣ್ ನನ್ನು ಉಡುಪಿ ಮತ್ತು ಬೆಳಗಾವಿ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಸೆರೆಹಿಡಿದಿದ್ದು, ಇಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಯ್ನಾಸ್ ಟಾರ್ಗೆಟ್ ಮಾಡಿ ಪ್ರವೀಣ್ ಕೊಲೆ ಮಾಡಿದ್ದಾನೆ. ಇಬ್ಬರೂ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದರು. ಆಯ್ನಾಸ್ ಗಗನಸಖಿಯಾಗಿದ್ದು, ಪ್ರವೀಣ್ ಕ್ಯಾಬಿನ್ ಕ್ರೂ ಆಗಿದ್ದರು. ಪರಸ್ಪರ ದ್ವೇಷ ಅಥವಾ ಏಕಮುಖ ಪ್ರೀತಿಯಿಂದ ಕೃತ್ಯವೆಸಗಿರುವ ಸಾಧ್ಯತೆ ಇದೆ.

ನಾಲ್ವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಪ್ರವೀಣ್ ಚೌಗಲೆ ನಿನ್ನೆ ಬಂಧಿತನಾಗಿದ್ದಾನೆ. ಉಡುಪಿ ಜಿಲ್ಲೆಯ ನೇಜಾರಿನ ತೃಪ್ತಿ ನಗರದಲ್ಲಿ ಭಾನುವಾರ ನಾಲ್ವರನ್ನು ಹತ್ಯೆ ಮಾಡಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular