HomeCrimeBREAKING NEWS: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಆರೋಪಿ ಅರೆಸ್ಟ್

BREAKING NEWS: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಆರೋಪಿ ಅರೆಸ್ಟ್

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿಯಲ್ಲಿ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರವೀಣ್ ಅರುಣ್ ಚೌಗಲೆ ಬಂಧಿತ ಆರೋಪಿ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಉಡುಪಿ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ ಉಡುಪಿಗೆ ಕರೆದುಕೊಂಡು ಹೋಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

CRPF ಸಿಬ್ಬಂದಿಯಾಗಿರುವ ಪ್ರವೀಣ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ. ಕೊಲೆ ಮಾಡಿದ ನಂತರ ಕುಡಚಿಯಲ್ಲಿ ಸಂಬಂಧಿಕರ ಮನೆಯಲ್ಲಿ ತಲೆಮರೆಸಿಕೊಂಡಿದ್ದ. ಆರೋಪಿ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆತನನ್ನು ಬಂಧಿಸಲಾಗಿದೆ.

ಭಾನುವಾರ ಬೆಳಿಗ್ಗೆ ಉಡುಪಿ ತಾಲೂಕಿನ ಕೆಮ್ಮಣ್ಣು ನೇಜಾರಿನಲ್ಲಿ ಹಸಿನಾ, ಅವರ ಮಕ್ಕಳಾದ ಅಫ್ನಾನ್(23), ಆಯ್ನಾಜ್(21), ಅಸೀಮ್(14) ಅವರನ್ನು ಕೊಲೆ ಮಾಡಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular