HomeKarnatakaBIG NEWS: ಉಡುಪಿ ಮರ್ಡರ್ ಕೇಸ್; ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿ ವಿರುದ್ಧ ಸುಮೋಟೋ ಕೇಸ್...

BIG NEWS: ಉಡುಪಿ ಮರ್ಡರ್ ಕೇಸ್; ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿ ವಿರುದ್ಧ ಸುಮೋಟೋ ಕೇಸ್ ಫೈಲ್

ಉಡುಪಿ: ಉಡುಪಿ ಜಿಲ್ಲೆಯ ನೇಜಾರು ಎಂಬಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲಾಗಿದೆ.

ಹಫೀಜ್ ಮೊಹಮ್ಮದ್ ಎಂಬಾತ ಫೇಸ್ ಬುಕ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಗಳನ್ನು ಹಾಕಿದ್ದ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಮೂಲದ ಹಫೀಜ್ ಮೊಹಮ್ಮದ್ ಎಂಬಾತನ ವಿರುದ್ಧ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಸಂಬಂಧ ಪೋಸ್ಟ್ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 155, 505(2) ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಹಫೀಜ್ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನ.12ರಂದು ಉಡುಪಿ ಜಿಲ್ಲೆಯ ನೇಜಾರು ಮನೆಗೆ ನುಗ್ಗಿದ್ದ ಪ್ರವೀಣ್ ಚೌಗಲೆ ಎಂಬಾತ ನಾಲ್ವರನ್ನು ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿಯಾಗಿದ್ದ. ಕೃತ್ಯದ ಬಳಿಕ ಬೆಳಗಾವಿಯ ಕುಡುಚಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪ್ರವೀಣ್ ಚೌಗಲೆಯನ್ನು ಉಡುಪಿ ಪೊಲಿಸರು ಬಂಧಿಸಿ ತನಿಖೆ ನಡೆಸಿದ್ದಾರೆ. ಈ ಮಧ್ಯೆ ಹತ್ಯೆ ಪ್ರಕರಣದ ಬಗ್ಗೆ ಹಫೀಜ್ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ.

For Latest News Updates, Join Our Whatsapp Community🚩
RELATED ARTICLES

Most Popular