ಉಡುಪಿ 2026ರ ಪರ್ಯಾಯ ಮಹೋತ್ಸವಕ್ಕೆ ಸಿದ್ಧವಾಗಿದೆ. ಸಾವಿರಾರು ಭಕ್ತರು ಈ ಸಮಯದಲ್ಲಿ ಉಡುಪಿಗೆ ಭೇಟಿ ನೀಡಲಿದ್ದಾರೆ. ಆದ್ದರಿಂದ ಜಿಲ್ಲಾಡಳಿತ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಿ ಆದೇಶವನ್ನು ಹೊರಡಿಸಿದೆ.
ಈ ಕುರಿತು ಉಡುಪಿ ಡಿಸಿ ಸ್ವರೂಪ ಟಿ.ಕೆ. ಅಧಿಸೂಚನೆ ಹೊರಡಿಸಿದ್ದಾರೆ. 17/01/2026 ಮತ್ತು 18/01/2026 ರಂದು ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಸುಗಮ ಸಂಚಾರ, ವಾಹನ ಸಂಚಾರ ನಿಷೇಧ ಮತ್ತು ಬದಲಿ ಮಾರ್ಗದ ಕುರಿತು ಅಧಿಸೂಚನೆ ಎಂಬ ವಿಷಯವನ್ನು ಅಧಿಸೂಚನೆ ಒಳಗೊಂಡಿದೆ.
ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸಕ್ಕೆ ಉಡುಪಿ ಜಿಲ್ಲೆ, ಹೊರ ಜಿಲ್ಲೆಗಳು ಮತ್ತು ದೇಶದ ನಾನಾ ಭಾಗಗಳಿಂದ ಲಕ್ಷಕ್ಕಿಂತಲೂ ಹೆಚ್ಚು ಭಕ್ತಾದಿಗಳು ಆಗಮಿಸಲಿದ್ದಾರೆ. ಪರ್ಯಾಯ ಮಹೋತ್ಸವದ ಅಂಗವಾಗಿ ಜ.17ರ ಸಂಜೆಯಿಂದ ಉಡುಪಿ ನಗರ ವ್ಯಾಪ್ತಿಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದ್ದಾರೆ.
ಜ.18ರಂದು ಮುಂಜಾನೆ 2 ಗಂಟೆಗೆ ಪರ್ಯಾಯ ಉತ್ಸವದ ಮೆರವಣಿಗೆ ಜೋಡುಕಟ್ಟೆಯಿಂದ ಪ್ರಾರಂಭವಾಗಿ ಶ್ರೀ ಕೃಷ್ಣ ಮಠಕ್ಕೆ ಪ್ರವೇಶಿಸಲಿದೆ. ಈ ಸಂದರ್ಭ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಟಿಯಿಂದ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ನಿಷೇಧ ಅದೇಶವನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಜನವರಿ 17ರ ಮಧ್ಯಾಹ್ನ 2 ಗಂಟೆಯಿಂದ ಜ.18ರ ಬೆಳಗ್ಗೆ 7 ಗಂಟೆಯವರೆಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧ, ಬದಲಿ ಮಾರ್ಗ ಹಾಗೂ ಪಾರ್ಕಿಂಗ್ ನಿಷೇಧದ ಬಗ್ಗೆ ಈ ಅಧಿಸೂಚನೆ.
- ಮಂಗಳೂರು ಕಡೆಯಿಂದ ಉಡುಪಿ, ಮಣಿಪಾಲ ಕಡೆಗೆ ಬರುವಂತಹ ವಾಹನ: ರಾ.ಹೆ. 66 ರಲ್ಲಿ ಕರಾವಳಿ ಜಂಕ್ಷನ್‌ತಲುಪಿ ನಂತರ ಬನ್ನಂಜೆ ಮಾರ್ಗವಾಗಿ ಉಡುಪಿ ಸಿಟಿ ಮತ್ತು ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸುವುದು. ಮುಂದುವರಿದು ಮಣಿಪಾಲಕ್ಕೆ ಹೋಗುವುದು. ಉಡುಪಿ ನಗರಕ್ಕೆ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯ ತನಕ ಎಲ್ಲಾ ವಾಹನಗಳ ಪ್ರವೇಶವನ್ನು ನಿಷೇಧಿಸಿದೆ.
- ಸಂಜೆ 7 ಗಂಟೆಯಿಂದ ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆಯಾಗಿದ್ದು, ಕರಾವಳಿ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಇಳಿಸಿ ಅಲ್ಲಿಂದಲೇ ಪ್ರಯಾಣಿಕರನ್ನು ಕರೆದುಕೊಂಡು ವಾಪಾಸು ಮಂಗಳೂರು ಕಡೆಗೆ ರಾಹೆ 66 ರಲ್ಲಿ ಅಂಬಲಪಾಡಿ, ಬಲಾಯಿಪಾದ ಮುಖೇನಾ ಹೋಗುವುದು. ಮಣಿಪಾಲಕ್ಕೆ ಹೋಗುವ ವಾಹನಗಳು ಕರಾವಳಿ ಜಂಕ್ಷನ್‌ನಿಂದ ಮುಂದಕ್ಕೆ ಸಾಗಿ ಅಂಬಾಗಿಲು ಮುಖೇನ ಪೆರಂಪಳ್ಳಿ ರಸ್ತೆಯಿಂದಾಗಿ ಕಾಯಿನ್ ಸರ್ಕಲ್, ಸಿಂಡಿಕೇಟ್ ಸರ್ಕಲ್ ಮಾರ್ಗವಾಗಿ ಮಣಿಪಾಲ, ಕಾರ್ಕಳ ಕಡೆಗೆ ಹೋಗುವುದು.
- ಕುಂದಾಪುರ ಕಡೆಯಿಂದ ಉಡುಪಿ,ಮಣಿಪಾಲ ಕಡೆಗೆ ಬರುವಂತಹ ವಾಹನಗಳು. ಕುಂದಾಪುರ-ಬ್ರಹ್ಮಾವರ ಮಾರ್ಗವಾಗಿ ಉಡುಪಿ ನಗರಕ್ಕೆ ಬರುವ ಎಲ್ಲಾ ವಾಹನಗಳು ಅಂಬಾಗಿಲು ಮುಖೇನ ರಾಹ 66 ರಲ್ಲಿ ಕರಾವಳಿ ಜಂಕ್ಷನ್ ತಲುಪಿ ಬನ್ನಂಜೆ ಮಾರ್ಗವಾಗಿ ಉಡುಪಿ ಸಿಟಿ, ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸುವುದು. ಕುಂದಾಪುರದಿಂದ ಉಡುಪಿ ನಗರಕ್ಕೆ ಆಗಮಿಸುವ ಎಲ್ಲಾ ವಾಹನಗಳನ್ನು ಪ್ರವೇಶಿಸುದನ್ನು ನಿಷೇಧಿಸಿದೆ.
- ಸಂಜೆ 7 ಗಂಟೆಯಿಂದ ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆಯಾಗಿದ್ದು, ಕರಾವಳಿ ಜಂಕ್ಷನ್‌ನಲ್ಲಿ ಪಯಾಣಿಕರನ್ನು ಇಳಿಸಿ ಅಲ್ಲಿಂದಲೇ ಪ್ರಯಾಣಿಕರನ್ನು ಕರೆದುಕೊಂಡು ವಾಪಾಸು ನಿಟ್ಟೂರು, ಅಂಬಾಗಿಲು, ಸಂತೆಕಟ್ಟೆ, ಮುಖೇನಾ ಕುಂದಾಪುರ ಕಡೆಗೆ ಹೋಗುವುದು. ಮಣಿಪಾಲಕ್ಕೆ ಹೋಗುವ ವಾಹನಗಳು ಅಂಬಾಗಿಲು ಮುಖೇನ ಪೆರಂಪಳ್ಳಿ ರಸ್ತೆಯಿಂದಾಗಿ ಕಾಯಿನ್ ಸರ್ಕಲ್, ಸಿಂಡಿಕೇಟ್ ಸರ್ಕಲ್ ಮಾರ್ಗವಾಗಿ ಮಣಿಪಾಲ, ಕಾರ್ಕಳ ಕಡೆಗೆ ಹೋಗುವುದು.
- ಕುಕ್ಕಿಕಟ್ಟೆ, ಮೂಡುಬೆಳ್ಳೆ, ಅಲೆವೂರು, ಕೊರಂಗ್ರಪಾಡಿ, ಬೈಲೂರು ಕಡೆಗಳಿಗೆ ಹೋಗುವ ಮತ್ತು ಬರುವಂತಹ ವಾಹನಗಳು. ಕುಕ್ಕಿಕಟ್ಟೆ, ಮೂಡುಬೆಳ್ಳ, ಅಲೆವೂರು, ಕೊರಂಗ್ರಪಾಡಿ, ಬೈಲೂರು ಕಡೆಗಳಿಗೆ ಹೋಗುವ ಮತ್ತು ಬರುವಂತಹ ವಾಹನಗಳು ಚಿಟ್ಟಾಡಿ, ಬೀಡಿನಗುಡ್ಡ, ಶಾರದ ಕಲ್ಯಾಣ ಮಂಟಪ, ಕಲ್ಸಂಕ ಮಾರ್ಗವಾಗಿ ಉಡುಪಿ ಸಿಟಿ, ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸುವುದು.
- ಉಡುಪಿ ನಗರಕ್ಕೆ ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯ ತನಕ ಎಲ್ಲಾ ವಾಹನಗಳು ಪ್ರವೇಶಿಸುವುದನ್ನು ನಿಷೇಧಿಸಿದೆ. ಬೀಡಿನಗುಡ್ಡೆ, ಚಿಟ್ಟಾಡಿ ಮುಖಾಂತರ ಮಿಷನ್ ಕಂಪೌಂಡ್ ರಸ್ತೆ ಅಂತಿಮ ನಿಲುಗಡೆಯಾಗಿದ್ದು ಅಲ್ಲಿಂದಲೇ ವಾಪಾಸು ಹಿಂತಿರುಗುವುದು.
- ಕಾರ್ಕಳ-ಮಣಿಪಾಲ ಕಡೆಯಿಂದ ಉಡುಪಿ ನಗರಕ್ಕೆ ಬರುವಂತಹ ವಾಹನಗಳು. ಕಾರ್ಕಳ, ಮಣಿಪಾಲಕ್ಕೆ ಹೋಗಿ ಬರುವಂತಹ ವಾಹನಗಳು ನೇರವಾಗಿ ಕಲ್ಸಂಕ ಮಾರ್ಗವಾಗಿ ಉಡುಪಿ ಸಿಟಿ, ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸುವುದು. ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಕಾಯಿನ್ ಸರ್ಕಲ್, ಪೆರಂಪಳ್ಳಿ, ಅಂಬಾಗಿಲು, ನಿಟ್ಟೂರು ಮಾರ್ಗವಾಗಿ ಕರಾವಳಿ ಜಂಕ್ಷನ್ ಆಗಮಿಸಿ, ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆಯಾಗಿದ್ದು, ಅಲ್ಲಿಂದಲೇ ಪ್ರಯಾಣಿಕರನ್ನು ಕರೆದುಕೊಂಡು ವಾಪಾಸು ನಿಟ್ಟೂರು, ಅಂಬಾಗಿಲು, ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲ, ಕಾರ್ಕಳ ಕಡೆಗೆ ಹೋಗುವುದು.
- ಮಂಗಳೂರಿನಿಂದ ಮುಂಬೈಗೆ – ಬೆಂಗಳೂರಿಗೆ ಹೋಗುವ ವಾಹನಗಳು. ಮಂಗಳೂರಿನಿಂದ ಮುಂಬೈ, ಹುಬ್ಬಳ್ಳಿ ಕಡೆಗೆ ಹೋಗುವ ಎಲ್ಲಾ ಖಾಸಗಿ/ ಕೆಎಸ್‌ಆರ್‌ಟಿಸಿ ಬಸ್ಸುಗಳು ಪ್ರಯಾಣಿಕರನ್ನು ಬಪಾದ ಬಳಿ ಹತ್ತಿಸಿಕೊಂಡು ಹೋಗುವುದು. ಬೆಂಗಳೂರು ಕಡೆಗೆ ಹೋಗುವ ಎಲ್ಲಾ ಖಾಸಗಿ/ ಕೆಎಸ್‌ಆರ್‌ಟಿಸಿ ಬಸ್ಸುಗಳು ಪ್ರಯಾಣಿಕರನ್ನು ಮಣಿಪಾಲ ಬಳಿ ಹತ್ತಿಸಿಕೊಂಡು ಹೋಗುವುದು. ಮಂಗಳೂರಿನಿಂದ ಮುಂಬೈ ಕಡೆಗೆ ಮತ್ತು ಬೆಂಗಳೂರಿಗೆ ಹೋಗುವ ಎಲ್ಲಾ ಖಾಸಗಿ/ ಕೆಎಸ್‌ಆರ್‌ಟಿಸಿ ಬಸ್ಸುಗಳು ಬಪಾದೆ, ಅಂಬಲಪಾಡಿ, ಕರಾವಳಿ ಜಂಕ್ಷನ್, ಬನ್ನಂಜೆ, ಸಿಟಿ ಬಸ್ಸು ನಿಲ್ದಾಣ, ಕೆ.ಎಸ್.ಅರ್.ಟಿ.ಸಿ ಬಸ್ಸು ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಕರೆದುಕೊಂಡು ಅದೇ ಮಾರ್ಗವಾಗಿ ಪ್ರಯಾಣವನ್ನು ಮುಂದುವರಿಸುವುದು.

