HomeLatest NewsBREAKING: ಉಡುಪಿಗೆ ಆಗಮಿಸಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್: ಶ್ರೀಕೃಷ್ಣ ಮಠದಲ್ಲಿ ಗೀತೋತ್ಸವ ಸಮಾರೋಪದಲ್ಲಿ ಭಾಗಿ

BREAKING: ಉಡುಪಿಗೆ ಆಗಮಿಸಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್: ಶ್ರೀಕೃಷ್ಣ ಮಠದಲ್ಲಿ ಗೀತೋತ್ಸವ ಸಮಾರೋಪದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಗಿತೋತ್ಸವ ಸಮಾರೋಪದಲ್ಲಿ ಭಾಗಿಯಾಗಲಿದ್ದಾರೆ.

ಇಂದು ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪವನ್ ಕಲ್ಯಾಣ್, ಬಳಿಕ ಉಡುಪಿಗೆ ಆಗಮಿಸಿದ್ದು, ಪ್ರವಾಸಿ ಮಂದಿರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಸಂಜೆ ೪ಗಂಟೆಗೆ ಶ್ರೀಕೃಷ್ಣ ಮಠಕ್ಕೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ಬಳಿಕ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠ ಆಯೋಜಿಸಿರುವ ಲಕ್ಷ ಕಂಠ ಗೀತಾ ಪಾರಾಯಣ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನವೆಂಬರ್ 28ರಂದು ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು. ಇಂದು ಗೀತೋತ್ಸವ ಸಮಾರೋಪದಲ್ಲಿ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular