HomeLatest Newsಪೊಲೀಸ್ ನಿರೀಕ್ಷಕ ಮಂಜುನಾಥ್ ಬಡಿಗೇರ್ ಎತ್ತಂಗಡಿ

ಪೊಲೀಸ್ ನಿರೀಕ್ಷಕ ಮಂಜುನಾಥ್ ಬಡಿಗೇರ್ ಎತ್ತಂಗಡಿ

ಉಡುಪಿ: ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ್ ವಿ.ಬಡಿಗೇರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಉಡುಪಿ ನಗರ ಠಾಣೆಗೆ ಬಂದು ಕೇವಲ ಏಳು ತಿಂಗಳಾಗಿತ್ತು. ಇದೀಗ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ. ಉಡುಪಿ ನಗರ ಠಾಣೆಯಿಂದ ಬೆಳಗಾವಿ ನಗರ ವಿಶೇಷ ಶಾಖೆಗೆ ಮಂಜುನಾಥ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಮಂಜುನಾಥ್ ಅವರಿಂದ ತೆರವಾಗಿರುವ ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕರ ಹುದ್ದೆಗೆ ಈವರೆಗೂ ಯಾವುದೇ ನೇಮಕವಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular