ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಬಿರುಗಾಳಿ ರಭಸಕ್ಕೆ ಪುತ್ತಿಗೆ ವಿಷ್ಣುಮೂರ್ತಿ ದೇವಸ್ಥಾನದ ಧ್ವಜಸ್ತಂಭ ಮುರಿದುಬಿದ್ದ ಘಟನೆ ನಡೆದಿದೆ.
ಹಿರಿಯಡ್ಕ ಬಳಿಯ ಪುತ್ತಿಗೆ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದೆ. ರಥೋತ್ಸವಕ್ಕೆ ಎಲ್ಲಾ ಸಿದ್ಧತೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಬಿರುಗಾಳಿ, ಮಳೆಯಿಂದಾಗಿ ದೇವಸ್ಥಾನದ ಮುಂಭಾಗದ ಧ್ವಜಸ್ತಂಭ ತುಂಡಾಗಿ ಬಿದ್ದಿದೆ. ರಥ ಕೂಡ ಒಂದು ಭಾಗ ವಾಲಿದೆ.
ನೂರು ವರ್ಷಗಳ ಹಿಂದೆ ದೇವಸ್ಥಾನದ ಧ್ವಜಸ್ತಂಭ ನಿರ್ಮಾಣವಾಗಿತ್ತು ಎನ್ನಲಾಗಿದೆ. ಹೊಸ ಧ್ವಜಸ್ತಂಭ ನಿರ್ಮಾಣಕ್ಕೆ ಚರ್ಚೆ ನಡೆದಿದೆ. ದೇವಸ್ಥಾನದ ವಾರ್ಷಿಕ ಉತ್ಸವ ನಡೆಯುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಅಡಿಕೆ ಮರವನ್ನು ಧ್ವಜಸ್ತಂಭದ ಜಾಗದಲ್ಲಿ ನೆಟ್ಟು ಉತ್ಸವವನ್ನು ನಡೆಸಲಾಗುತ್ತಿದೆ.