BIG NEWS: ರೆಡ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕಾ ಕ್ರಮಕ್ಕೆ ಉಡುಪಿ ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಡಳಿತಕ್ಕೆ ಸೂಚಿಸಿದ್ದಾರೆ.

ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸಚಿವರು ಸೂಚಿಸಿದ್ದಾರೆ. ಅಲ್ಲದೇ ಸಾರ್ವಜನಿಕರೂ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ, ನದಿ – ಸಮುದ್ರ ಪಾತ್ರಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಬೇಕು ಎಂದು ಸಚಿವರು ತಿಳಿಸಿದ್ದಾರೆ. ‌

ಸಮುದ್ರ ತೀರದ ಹಾಗೂ, ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆಗೆಯಬೇಕು, 7 ತಾಲೂಕುಗಳಲ್ಲಿ ಜನರ ಅನುಕೂಲಕ್ಕಾಗಿ ದಿನ 24 ಗಂಟೆ ಸಹಾಯವಾಣಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read