ಉಡುಪಿ: ಪರ್ಯಾಯ ಪುತ್ತಿಗೆ ಮಠ ಮತ್ತು ಶ್ರೀಕೃಷ್ಣಮಠಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಿದ್ದು, ಕೃಷ್ಣನೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ ಆರಂಭವಾಗಿದೆ.
ಆದಿ ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸಚಿವ ದಿನೇಶ್ ಗುಂಡೂರಾವ್ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಆದಿ ಉಡುಪಿಯಿಂದ ಪ್ರಧಾನಿ ಮೋದಿ ರೋಡ್ ಶೋ ಆರಂಭವಾಗಿದ್ದು, ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ರೋಡ್ ಶೋ ನಡೆದಿದೆ. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿರುವ ಜನರು ಮೋದಿ ಮೋದಿ ಎಂದು ಜಯಘೋಷಗಳನ್ನು ಕೂಗಿ ಪ್ರಧಾನಿ ಮೇಲೆ ಹೂಮಳೆಗರೆದು ಸ್ವಾಗತಿಸಿದ್ದಾರೆ.
ಕಾರಿನ ಡೋರ್ ನಲ್ಲಿ ನಿಂತು ಜನರತ್ತ ಕೈಬೀಸಿ ಪ್ರಧಾನಿ ಮೋದಿ ಸಾಗಿದ್ದಾರೆ. ರೋಡ್ ಶೋ ಮೂಲಕವಾಗಿ ಶ್ರೀಕೃಷ್ಣ ಮಠದ ರಥಬೀದಿಗೆ ಪ್ರಧಾನಿ ಮೋದಿ ಆಗಿಸಿದ್ದಾರೆ. ಬಳಿಕ ಶ್ರೀಕೃಷ್ನಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಕನಕನ ಕಿಂಡಿ ಮೂಲಕ ಶ್ರೀಕೃಷ್ಣ ದರ್ಶನ ಪಡೆಯಲಿರುವ ಮೋದಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
