HomeKarnatakaBREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ; ಸುತ್ತಿಗೆಯಿಂದ ಹೊಡೆದು ಹೆತ್ತ ತಂದೆ-ತಾಯಿಯನ್ನೇ ಹತ್ಯೆಗೈದ...

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ; ಸುತ್ತಿಗೆಯಿಂದ ಹೊಡೆದು ಹೆತ್ತ ತಂದೆ-ತಾಯಿಯನ್ನೇ ಹತ್ಯೆಗೈದ ಪಾಪಿ ಪುತ್ರ.!

ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಮಗನೇ ತನ್ನ ವೃದ್ಧ ತಂದೆ-ತಾಯಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆರೋಪ ಕೇಳಿಬಂದಿದೆ. ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಮೃತರನ್ನು ಬೈಕಾಡಿಯ ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಮತ್ತು ಸಂಶದ್ ಬೇಗಂ ಎಂದು ಗುರುತಿಸಲಾಗಿದೆ. ಅವರ ಪುತ್ರ ಶಾಹಿದ್ ಅಲಿ (31) ಹತ್ಯೆ ಆರೋಪಿಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ಸುತ್ತಿಗೆಯಿಂದ ಹೊಡೆದು ತಂದೆ-ತಾಯಿಯನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಹತ್ಯೆಯ ಹಿಂದಿನ ಕಾರಣ ಹಾಗೂ ಘಟನೆಯ ಸಂಪೂರ್ಣ ವಿವರಗಳನ್ನು ತನಿಖೆ ಮೂಲಕ ಪತ್ತೆಹಚ್ಚಲಾಗುತ್ತಿದೆ. ಮಗನೇ ಹೆತ್ತವರನ್ನು ಹತ್ಯೆಗೈದಿರುವ ಆರೋಪ ಬ್ರಹ್ಮಾವರದಲ್ಲಿ ಭಾರೀ ಆಘಾತಕ್ಕೆ ಕಾರಣವಾಗಿದ್ದು, ಪೊಲೀಸರ ತನಿಖೆ ಮುಂದುವರಿದಿದೆ.

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕೊಲೆ, ಆತ್ಮಹತ್ಯೆ ಸೇರಿದಂತೆ ಅಪರಾಧ ಪ್ರಕರಣಗಳು ಆತಂಕ ಮೂಡಿಸುತ್ತಿವೆ. ಒಂದೆಡೆ ಕ್ಷುಲ್ಲಕ ಕಾರಣಕ್ಕೆ ಕೊಲೆಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ಕೌಟುಂಬಿಕ ಕಲಹ, ಕಿರುಕುಳ, ಬ್ಲ್ಯಾಕ್‌ಮೇಲ್ ಸೇರಿದಂತೆ ಹಲವು ಕಾರಣಗಳಿಂದ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ.

ಇತ್ತೀಚಿನ ಪ್ರಕರಣಗಳನ್ನು ಗಮನಿಸಿದರೆ, ವೈಯಕ್ತಿಕ ದ್ವೇಷ, ಕೌಟುಂಬಿಕ ಸಮಸ್ಯೆ, ಪ್ರೀತಿ-ಪ್ರೇಮದ ವಿಚಾರ, ಕಿರುಕುಳ ಹಾಗೂ ಮಾನಸಿಕ ಒತ್ತಡದಂತಹ ಹಲವು ಕಾರಣಗಳು ಅಪರಾಧ ಮತ್ತು ಆತ್ಮಹತ್ಯೆ ಪ್ರಕರಣಗಳಿಗೆ ಕಾರಣವಾಗುತ್ತಿರುವುದು ಕಂಡುಬರುತ್ತಿದೆ.

ಕೊಲೆ-ಆತ್ಮಹತ್ಯೆ ಪ್ರಕರಣಗಳಿಗೆ ಕಡಿವಾಣ ಹಾಕಲು ಕಾನೂನು ಕ್ರಮಗಳ ಜೊತೆಗೆ, ಕೌಟುಂಬಿಕ ಹಾಗೂ ಸಾಮಾಜಿಕ ಮಟ್ಟದಲ್ಲೂ ಜಾಗೃತಿ ಮತ್ತು ಮಾನಸಿಕ ಬೆಂಬಲದ ಅಗತ್ಯವಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular