HomeKarnatakaಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ನಡುರಸ್ತೆಯಲ್ಲಿಯೇ ರಂಪಾಟ!

ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ನಡುರಸ್ತೆಯಲ್ಲಿಯೇ ರಂಪಾಟ!

ಉಡುಪಿ: ಕಂಠ ಪೂರ್ತಿ ಕುಡಿದ ವಿದ್ಯಾರ್ಥಿಗಳು ಬಾರ್ ಅಂಗಡಿ ಮುಂದೆ ನಡುರಸ್ತೆಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಣಿಪಾಲ್ ಕಾಯಿನ್ ಸರ್ಕಾಲ್ ನಲ್ಲಿ ನಡೆದಿದೆ.

ಮದ್ಯದ ಅಮಲಿನಲ್ಲಿ ವಿದ್ಯಾರ್ಥಿಗಳ ಎರಡು ಗುಂಪು ಪರಸ್ಪರ ಹೊಡೆದಾಡಿಕೊಂಡಿದ್ದು, ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯ ಬಟ್ಟೆಯನ್ನು ಹರಿದು ರಂಪಾಟ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸುತ್ತಿದ್ದಂತೆಯೇ ವಿದ್ಯಾರ್ಥಿಗಳ ಗುಂಪು ಸ್ಥಳದಿಂದ ಪರಾರಿಯಾಗಿದೆ. ವಿದ್ಯಾರ್ಥಿಗಳ ಮಾರಾಮಾರಿಗೆ ನಿಖರ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಣಿಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular