ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್; ಪ್ರಜ್ವಲ್ ಮಾದರಿಯ ಮತ್ತೊಂದು ಪ್ರಕರಣ ಬೆಳಕಿಗೆ

ಉಡುಪಿ: ಉಡುಪಿಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿಕೃತ ಕಾಮಿಯೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯವೆಸಗಿ, ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮವಾಸ್ಯೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂಸದ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಇದಾಗಿದೆ. ಉದ್ಯಮಿ ಶ್ರೇಯಸ್ ನಾಯಕ್ (25) ಎಂಬಾತ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾನೆ. ವಿದ್ಯಾರ್ಥಿನಿಯರನ್ನು ನಿರ್ಜನಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ವಿಡಿಯೋ ಮಾಡಿ ಅದನ್ನು ತನ್ನ ಲ್ಯಾಪ್ ಟಾಪ್ ನಲ್ಲಿ ಇಟ್ಟುಕೊಂಡು ಆರೋಪಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆ.

ಕಳೆದ ಒಂದು ವರ್ಷದಿಂದ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದು, ಬಾಲಕಿ ಗರ್ಭವತಿಯಾಗಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ. ಶಾಲಾ-ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡಿ ಕಾಮುಕ ಈ ಕೃತ್ಯವೆಸಗುತ್ತಿದ್ದ ಎನ್ನಲಾಗಿದೆ. ಅಮವಾಸ್ಯೆಬೈಲು ಠಾಣೆಯಲ್ಲಿ ಪೋಕ್ಸೋ ಪ್ರಕರಣದಡಿ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಆರೋಪಿ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read