HomeKarnatakaBIG NEWS : ಚುರುಕುಗೊಂಡ ಉಡುಪಿ ವಿಡಿಯೋ ಪ್ರಕರಣದ ತನಿಖೆ : ಗೌಪ್ಯ ಸ್ಥಳದಲ್ಲಿ ವಿದ್ಯಾರ್ಥಿನಿಯರ...

BIG NEWS : ಚುರುಕುಗೊಂಡ ಉಡುಪಿ ವಿಡಿಯೋ ಪ್ರಕರಣದ ತನಿಖೆ : ಗೌಪ್ಯ ಸ್ಥಳದಲ್ಲಿ ವಿದ್ಯಾರ್ಥಿನಿಯರ ವಿಚಾರಣೆ

ಉಡುಪಿ : ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ಚುರುಕಾಗಿದ್ದು, ಗೌಪ್ಯ ಸ್ಥಳದಲ್ಲಿ ಪೊಲೀಸರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದ್ದಾರೆ.

ಪೊಲೀಸರು ಕರೆದಾಗ ತನಿಖೆಗೆ ಖುದ್ದು ಹಾಜರಾಗಬೇಕು ಎಂದು ಉಡುಪಿ ಜೆಎಂಎಫ್ಸಿ ನ್ಯಾಯಾಲಯ ಷರತ್ತುಬದ್ದ ಜಾಮೀನು ನೀಡಿತ್ತು. . ಈ ನಡುವೆ ಎರಡು ಬಾರಿ ಭೇಟಿಯಾಗಿ ಸಂತ್ರಸ್ತ ವಿದ್ಯಾರ್ಥಿನಿಯ ಹೇಳಿಕೆಯನ್ನೂ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಗೌಪ್ಯ ಸ್ಥಳದಲ್ಲಿ ಪೊಲೀಸರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿ ಪ್ರಕರಣದ ಸಂಬಂಧ ಹಲವು ವಿಚಾರಗಳನ್ನು ಕಲೆ ಹಾಕಿದ್ದಾರೆ.

ಸದ್ಯ,. ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಲ್ಫೆ ಇನ್ಸ್ ಪೆಕ್ಟರ್ ಮಂಜುನಾಥ್ ಗೌಡ ಅವರನ್ನು ಬದಲಾವಣೆ ಮಾಡಲಾಗಿದ್ದು, ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.ಉಡುಪಿ ಎಸ್.ಪಿ ಅಕ್ಷಯ್, ತನಿಖಾಧಿಕಾರಿ ಬದಲಾಯಿಸಿ, ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular