ಉಡುಪಿ ಕಾಲೇಜ್ ಶೌಚಾಲಯ ವಿಡಿಯೋ ಚಿತ್ರೀಕರಣ ತನಿಖೆ ಸಿಐಡಿಗೆ ವಹಿಸಿ ಆದೇಶ

ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಲಾಗಿದೆ.

ಸಿಎಂ ಸಿದ್ಧರಾಮಯ್ಯ ಅವರು ಟ್ವೀಟ್ ಮಾಡಿ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಚಾರವಾಗಿ ಬಿಜೆಪಿ ಹೋರಾಟ ನಡೆಸಿತ್ತು. ಪಕ್ಷದ ಶಾಸಕರು ರಾಜ್ಯಪಾಲರಿಗೂ ದೂರು ನೀಡಿ ಉನ್ನತಮಟ್ಟದ ತನಿಖೆಗೆ ಒತ್ತಾಯಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read