ಉಡುಪಿ: ಮಹಿಳೆಯೊಬ್ಬಳು ಹೆತ್ತ ಮಗುವನ್ನು ನೇಣು ಬಿಗಿದು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ.
ಕುಂಜಾಲದ ಹೇರಂಜೆ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಸುಷ್ಮಿತಾ (26) ಎಂಬ ಮಹಿಳೆ ತನ್ನ ಒಂದೂವರೆ ವರ್ಷದ ಮಗುವನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿದೆ ಎಂದು ತಿಳಿದುಬಂದಿದೆ.
ಕೆಲ ವರ್ಷಗಳ ಹಿಂದೆ ಸುಷಿತಾ ಪತಿ ಹಾಗೂ ಕುಟುಂಬದವರ ವಿರುದ್ಧ ವಿರುದ್ಧ ಕೊಲೆಯತ್ನ ಕೇಸ್ ದಾಖಲಾಗಿತ್ತು. ಕೋರ್ಟ್ ನಲ್ಲಿ ಇತ್ತೀಚೆಗೆ ಈ ಆರೋಪ ಕೂಡ ಸಾಬೀತಾಗಿತ್ತು. ಇದನ್ನು ಪ್ರಶ್ನಿಸಿ ಕುಟುಂಬ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಆದರೆ ಹೈಕೋರ್ಟ್ ಕೂಡ ಆರೋಪ ಎತ್ತಿಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಉಡುಪಿ ಎಸ್ ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.