ಉಡುಪಿ: ಮಾರಕಾಸ್ತ್ರಗಳ ಫೋಟೋ, ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಯುವಕನನ್ನು ಎಸ್ ಎ ಎಫ್ ತಂಡ ಉಡುಪಿಯಲ್ಲಿ ಬಂಧಿಸಿದೆ.
ಬಂಧಿತನನ್ನು ಉಡುಪಿ ಜಿಲ್ಲೆಯ ಕಾರ್ಕಳದ ಇರ್ವತ್ತೂರು ಗ್ರಾಮದ ಆಶಿಕ್ ಎಸ್ ಕೋಟ್ಯಾನ್ ಎಂದು ಗುರುತಿಸಲಾಗಿದೆ. ಈತ ಇನ್ ಸ್ಟಾ ಗ್ರಾಂ ನಲ್ಲಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ.
ನಮಗೆ ಯಾವುದೇ ಉತ್ತರಗಳು ಬೇಡ. ರಕ್ತಕ್ಕೆ ರಕ್ತವೇ ಉತ್ತರವಾಗಬೇಕು. ಜೀವಕ್ಕೆ ಜೀವವೇ ಬೇಕು ಎಂದು ಬರೆದು, ಮಾರಕಾಯುಧಗಳ ಫೋಟೋಗಳನ್ನು ಪೋಸ್ಟ್ ಮಾಡಿದ್ದ. ಈ ಹಿನ್ನೆಲೆಯಲ್ಲಿ ಯುವಕನ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.