HomeKarnatakaಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ: ಮೃತಳ ಮೈಮೇಲಿದ್ದ ಚಿನ್ನಾಭರಣಗಳನ್ನು ಕದ್ದೊಯ್ದ ಕಳ್ಳರು

ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ: ಮೃತಳ ಮೈಮೇಲಿದ್ದ ಚಿನ್ನಾಭರಣಗಳನ್ನು ಕದ್ದೊಯ್ದ ಕಳ್ಳರು

ಉಡುಪಿ: ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಕಳ್ಳರು ಮೃತ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ.

ಮೇ 17ರಂದು ತಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಲ್ಲೂರಿನ ದಳಿ ಎಂಬಲ್ಲಿ ಕೇರಳಂ ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಜೀಪಿಗೆ ಮೀನು ಸಾಗಾಟ ಇನ್ಸುಲೇಟರ್ ವಾಹನವೊಂದು ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಜ್ಯೋತಿ ಹಾಗೂ ಅರಿಯಾ ಅನೂಫ್ ​ಮೃತಪಟ್ಟಿದ್ದು, ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಆದರೆ, ಅಪಘಾತದ ಕರುಣಾಜನಕ ಪರಿಸ್ಥಿತಿಯಲ್ಲೂ ಕಳ್ಳರು ಮೃತ ಮಹಿಳೆ ಜ್ಯೋತಿ ಅವರ ಮೈಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಕದ್ದೊಯ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತ ನಡೆದ ಸ್ಥಳದಲ್ಲಿ ಸೃಷ್ಟಿಯಾಗಿದ್ದ ಗೊಂದಲದ ವಾತಾವರಣವನ್ನೇ ಬಂಡವಾಳ ಮಾಡಿಕೊಂಡ ಖದೀಮರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದು ಒಂದು ವಾರದ ಬಳಿಕ ಜ್ಯೋತಿ ಅವರ ಕುಟುಂಬಸ್ಥರಿಗೆ ಚಿನ್ನ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದ್ದು, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚಿನ್ನಾಭರಣ ಕದ್ದ ಕಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular