ಉಡುಪಿ: ಬಸ್ ಹಾಗೂ ಕ್ರೂಸರ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿಯ ಕಾರ್ಕಳ ತಾಲೂಕಿನ ಮಿಯಾರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 8 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

