HomeLatest Newsಉಡುಪಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಕಾಂಗ್ರೆಸ್ ಯುವ ಮುಖಂಡನ ಮೇಲೆ ತಲ್ವಾರ್ ನಿಂದ ಹಲ್ಲೆ

ಉಡುಪಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಕಾಂಗ್ರೆಸ್ ಯುವ ಮುಖಂಡನ ಮೇಲೆ ತಲ್ವಾರ್ ನಿಂದ ಹಲ್ಲೆ

ಉಡುಪಿ: ಮಾತುಕತೆಗೆಂದು ಕರೆದು ಯುವ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಪಿಪಿಸಿ ಕ್ರಾಸ್ ಬಳಿ ನಡೆದಿದೆ.

ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡ ಶರತ್ ಕುಂದರ್ ಮೇಲೆ ಹಲ್ಲೆ ನಡೆಸಿದ್ದಾರೆ. 6-7 ಜನರ ಗುಂಪು ಹಲ್ಲೆ ನಡೆಸಿದೆ ಎಂದು ತಿಳಿದುಬಂದಿದೆ. ಶಾಂತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ಇದೀಗ ಮಾರಾಮಾರಿ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ.

ಮಣಿಪಾಲ್ ಹೋಟೆಲ್ ನಲ್ಲಿ ನಡೆದಿದ್ದ ಗಲಾಟೆ ಪ್ರಕರಣದ ಮುಂದುವರೆದ ಭಾಗ ಇದು ಎಂದು ಹೇಳಲಾಗುತ್ತಿದೆ. ಮಾತುಕತೆ ನಡೆಸಲೆಂದು ಶರತ್ ಕುಂದರ್ ನನ್ನು ಕರೆಸಿಕೊಂಡಿದ್ದ ಗುಂಪು, ಟಾಟಾ ಸಫಾರಿ, ಮಹೀಂದ್ರ ಥಾರ್ ವಾಹನಗಳಲ್ಲಿ ದುಷ್ಕರ್ಮಿಗಳು ಬಂದು ತಲ್ವಾರ್ ನಿಂದ ಹೊಡೆದಿದ್ದಾರೆ. ಅಲ್ಲದೇ ಜೀವಬೆದರಿಕೆ ಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶರತ್ ಕುಂದರ್ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular