HomeLatest Newsಉಡುಪಿ ಶ್ರೀಕೃಷ್ಣ ಮಠದಲ್ಲಿ ಡ್ರೆಸ್ ಕೋಡ್ ಜಾರಿ: ಸಾಂಪ್ರದಾಯಿಕ ಉಡುಗೆ ಧರಿಸಿ ಬರುವಂತೆ ಭಕ್ತರಿಗೆ ಸೂಚನೆ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಡ್ರೆಸ್ ಕೋಡ್ ಜಾರಿ: ಸಾಂಪ್ರದಾಯಿಕ ಉಡುಗೆ ಧರಿಸಿ ಬರುವಂತೆ ಭಕ್ತರಿಗೆ ಸೂಚನೆ

ಉಡುಪಿ: ರಾಜ್ಯದ ವಿವಿಧ ದೇವಾಲಯಗಳಲ್ಲಿ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿಗೆ ತರಲಾಗುತ್ತಿರುವ ಬೆನ್ನಲ್ಲೇ ಉಡುಪಿ ಶ್ರೀಕೃಷ್ಣ ಮಠದಲ್ಲಿಯೂ ವಂಸ್ತ್ರಸಂಹಿತೆ ಜಾರಿಯಾಗಿದೆ. ಇನ್ಮುಂದೆ ಶ್ರೀಕೃಷ್ಣನ ದರ್ಶನಕ್ಕೆ ಆಗಮಿಸುವ ಭಕ್ತರು, ಪ್ರವಾಸಿಗರು ಜೀನ್ಸ್, ಟೀ ಶರ್ಟ್ ಧರಿಸುವಂತಿಲ್ಲ. ಸಾಂಪ್ರದಾಯಿಕ ಬಟ್ಟೆಗಳನ್ನು ಮಾತ್ರ ಧರಿಸಬೇಕು ಎಂದು ಸೂಚಿಸಲಾಗಿದೆ.

ಶ್ರೀಕೃಷ್ಣ ಮಠಕ್ಕೆ ಬರುವವರು ಸಾಂಪ್ರದಾಯಿಕವಾದ ಉಡುಗೆ ಧರಿಸಿ ಬರಬೇಕು ಎಂದು ಶಿರೂರು ಮಠದ ನೂತನ ಪರ್ಯಾಯ ಸ್ವಾಮೀಜಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿಯಾಗಿದೆ.

ಶ್ರೀಕೃಷ್ಣ ಮಠಕ್ಕೆ ಬರುವ ಪುರುಷರು ಅಂಗಿ, ಬನಿಯನ್, ಬರ್ಮುಡಾ, ಟೈಟ್ ವಸ್ತ್ರಗಳನ್ನು ಧರಿಸಿ ಬರುವಂತಿಲ್ಲ. ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್, ಯಾವುದೇ ಮಾಡ್ರನ್ ಬಟ್ಟೆಗಳನ್ನು ಧರಿಸಿ ಬರುವಂತಿಲ್ಲ. ಹಾಗೆ ಬಂದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ಆದೇಶ ಹೊರಡಿಸಲಾಗಿದೆ. ಕೊಲ್ಲೂರು, ಧರ್ಮಸ್ಥಳ, ಕಟಿಲು ದೇವಸ್ಥಾನಗಳಲ್ಲಿಯೂ ವಸ್ತ್ರಸಂಹಿತೆ ಜಾರಿಯಲ್ಲಿದೆ. ಅದೇ ರೀತಿ ಇದೀಗ ಉಡುಪಿ ಶ್ರೀಕೃಷ್ಣ ಮಠದಲ್ಲಿಯೂ ಕಟ್ಟುನಿಟ್ಟಾದ ವಸ್ತ್ರಸಂಹಿತೆ ಜಾರಿಗೆ ತರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular