HomeLatest Newsಯುಜಿಸಿ ಅರ್ಹತೆ ಇಲ್ಲದ ಅತಿಥಿ ಉಪನ್ಯಾಸಕರು ಶೈಕ್ಷಣಿಕ ಸಂಯೋಜಕರಾಗಿ ನೇಮಕ

ಯುಜಿಸಿ ಅರ್ಹತೆ ಇಲ್ಲದ ಅತಿಥಿ ಉಪನ್ಯಾಸಕರು ಶೈಕ್ಷಣಿಕ ಸಂಯೋಜಕರಾಗಿ ನೇಮಕ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಯುಜಿಸಿ ಅರ್ಹತೆ ಇಲ್ಲದಿದ್ದರೂ ಕನಿಷ್ಠ ಐದು ವರ್ಷ ಕಾರ್ಯ ನಿರ್ವಹಿಸಿರುವ 3853 ಅತಿಥಿ ಉಪನ್ಯಾಸಕರನ್ನು ಮಾನವೀಯ ನೆಲೆಗಟ್ಟಿನಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಶೈಕ್ಷಣಿಕ ಸಂಯೋಜಕರನ್ನಾಗಿ ನೇಮಿಸಿಕೊಳ್ಳಲು ತೀರ್ಮಾನಿಸಲಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಉನ್ನತ ಶಿಕ್ಷಣ ಪರಿಷತ್ ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾನೂನು ಪ್ರಕಾರ ಯುಜಿಸಿ ಅರ್ಹತೆ ಪಡೆಯದವರನ್ನು ಅತಿಥಿ ಉಪನ್ಯಾಸಕ ಸೇವೆಯಿಂದ ತೆಗೆಯಬೇಕಾಗುತ್ತದೆ. ಆದರೆ, ಅವರ ಇಷ್ಟು ವರ್ಷಗಳ ಸೇವೆ ಪರಿಗಣಿಸಿ ಮಾನವೀಯ ದೃಷ್ಟಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಗಳಲ್ಲಿ ಶೈಕ್ಷಣಿಕ ಸಂಯೋಜಕರನ್ನಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಚಿವರ ಸುದ್ದಿಗೋಷ್ಠಿ ಬೆನ್ನಲ್ಲೇ ಗುರುವಾರ ಅಧಿಕೃತ ಸರ್ಕಾರಿ ಆದೇಶ ಹೊರಡಿಸಲಾಗಿದೆ. ರಾಜ್ಯದ ಸರ್ಕಾರಿ ಪದವಿ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು 10,335 ಅತಿಥಿ ಉಪನ್ಯಾಸಕಾರರು ಸೇವೆ ಸಲ್ಲಿಸುತ್ತಿದ್ದಾರೆ. ಇವರಲ್ಲಿ 5267 ಮಂದಿ ಮಾತ್ರ ಯುಜಿಸಿ ನಿಗದಿತ ಅರ್ಹತೆ ಹೊಂದಿದ್ದಾರೆ. ಉಳಿದವರಿಗೆ ಯುಜಿಸಿ ಅರ್ಹತೆ ಇಲ್ಲ. ಇದರಲ್ಲಿ 1215 ಮಂದಿಯನ್ನು ಯುಜಿಸಿ ಅರ್ಹತೆ ಇಲ್ಲದಿದ್ದರೂ ಕಾರ್ಯಭಾರಕ್ಕೆ ಅನುಗುಣವಾಗಿ ಕೌನ್ಸೆಲಿಂಗ್ ಮೂಲಕ ಅತಿಥಿ ಉಪನ್ಯಾಸಕರಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಉಳಿದ 3853 ಮಂದಿ ಅತಿಥಿ ಉಪನ್ಯಾಸಕ ಸ್ಥಾನದಿಂದ ಕೈ ಬಿಟ್ಟು ಮಾನವೀಯ ನೆಲೆಯಲ್ಲಿ ಶೈಕ್ಷಣಿಕ ಸಂಯೋಜಕರಾಗಿ ನೇಮಕ ಮಾಡಲಾಗಿದ್ದು, ವಾರ್ಷಿಕ 98.08 ಕೋಟಿ ರೂ. ಅನುದಾನ ಬೇಕಾಗುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular