HomeLatest Newsಯುಜಿ ಆಯುಷ್ ಕೋರ್ಸ್ 3ನೇ ಸ್ಟ್ರೇ ವೇಕೆನ್ಸಿ ಸುತ್ತು, ಅರ್ಜಿ ಸಲ್ಲಿಸಲು ಅವಕಾಶ

ಯುಜಿ ಆಯುಷ್ ಕೋರ್ಸ್ 3ನೇ ಸ್ಟ್ರೇ ವೇಕೆನ್ಸಿ ಸುತ್ತು, ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಯುಜಿ ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಮೂರನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ಹೊಸದಾಗಿ ಅರ್ಜಿ ಸಲ್ಲಿಸಲು ಹಾಗೂ ನೀಟ್ ರೋಲ್ ನಂಬರ್ ಲಿಂಕ್ ಮಾಡಿಕೊಳ್ಳಲು (ವೈ ಕ್ಲಾಸ್ ಮಾತ್ರ) ಡಿ.3ರಿಂದ 5ರವರೆಗೆ ಅವಕಾಶ ನೀಡಲಾಗಿದೆ.

ಯುಜಿ ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಎನ್ ಸಿ ಐ ಎಸ್ ಎಂ, ಡಿ.10ರವರೆಗೆ ಅವಕಾಶ ನೀಡಿರುವ ಕಾರಣ 3ನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಮಾಡಲಾಗುತ್ತಿದೆ.

ಹೊಸದಾಗಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಡಿ.3ರ ಸಂಜೆ 6ರಿಂದ ಡಿ.5ರ ಮಧ್ಯಾಹ್ನ 1ಗಂಟೆವರೆಗೆ ಅವಕಾಶ ನೀಡಲಾಗಿದೆ. ಡಿ.5ರ ಸಂಜೆ 6ರ ನಂತರ ತಾತ್ಕಾಲಿಕ ಫಲಿತಾಂಶ ಹಾಗೂ ಡಿ.6ರ ಮಧ್ಯಾಹ್ನ 2 ಗಂಟೆ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ಡಿ.6ರಿಂದ 9ರವರೆಗೆ ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸಂಬಂಧಪಟ್ಟ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular