ಯುಜಿ ನೀಟ್: ರಾಜ್ಯದಲ್ಲಿನ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ

ಬೆಂಗಳೂರು: ಸರ್ಕಾರದ ನಿರ್ದೇಶನದಂತೆ 2025-26ನೇ ಸಾಲಿಗೆ ವೈದ್ಯಕೀಯ / ದಂತ ವೈದ್ಯಕೀಯ / ಆಯುಷ್ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) UGNEET-2025 ರಲ್ಲಿ ಅರ್ಹತೆಯನ್ನು ಪಡೆದಿರುವ ಹಾಗೂ ಅರ್ಹತಾ ಮಾನದಂಡಗಳನ್ನು ಪೂರೈಸುವ ಎಲ್ಲಾ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

UGNEET-2025 ರಲ್ಲಿ ನಿಗದಿಪಡಿಸಿರುವ ಕನಿಷ್ಠ ಅಂಕಗಳನ್ನು ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಮಾತ್ರ ವೈದ್ಯಕೀಯ / ದಂತ ವೈದ್ಯಕೀಯ / ಆರ್ಯುವೇದ, ಯುನಾನಿ, ಹೋಮಿಯೋಪತಿ ಪದವಿ ಕೋರ್ಸುಗಳ ಪ್ರವೇಶಕ್ಕೆ ಈ ಕೆಳಗೆ ವಿವರಿಸಿರುವಂತೆ ನೊಂದಣಿ ಮಾಡಿಕೊಳ್ಳಲು ಅರ್ಹರಿರುತ್ತಾರೆ. SC/ST/OBC ಅರ್ಹತಾ ಮಾನದಂಡಗಳು ಕರ್ನಾಟಕದ SC/ST/OBC ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.

 ಯುಜಿಸಿಇಟಿ-2025ಕ್ಕೆ ಈಗಾಗಲೇ ನೋಂದಣಿ ಮಾಡಿರುವ ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ನಿಗದಿತ ಲಿಂಕ್‌ನಲ್ಲಿ ನೀಟ್ ರೋಲ್ ನಂಬರ್ ENTRY ಮಾಡಿದ ನಂತರ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ ಹಾಗೂ ಮುದ್ರಿತವಾಗಿರುವ ನೀಟ್ ರೋಲ್ ನಂಬರ್ ಅನ್ನು ಪರಿಶೀಲಿಸಿಕೊಳ್ಳಿ.

ನಂತರ UG Verification Slip ಅನ್ನು ಪ್ರಾಧಿಕಾರದ ವೆಬ್‌ಸೈಟಿನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು. ಈಗಾಗಲೆ ದಾಖಲೆಗಳನ್ನು ಆನ್‌ಲೈನ್‌ ಮುಖಾಂತರ ಪರಿಶೀಲನೆ ಮಾಡಿರುವ ಹಿನ್ನಲೆಯಲ್ಲಿ ಯುಜಿನೀಟ್‌ಗೆ ಪ್ರತ್ಯೇಕ ದಾಖಲೆಗಳ ಪರಿಶೀಲನೆ ಇರುವುದಿಲ್ಲ.(ಹೊಸದಾಗಿ ಕ್ಷೇಮ್ ಮಾಡಲು ಅವಕಾಶವಿರುವುದಿಲ್ಲ)

 ಯುಜಿಸಿಇಟಿ-2025ರ ಅರ್ಜಿಯಲ್ಲಿ NRI Ward ಕ್ಷೇಮ್ಸ್ ಇರುವ ಎಲ್ಲಾ ಅಭ್ಯರ್ಥಿಗಳು, ನೀಟ್ ರೋಲ್ ನಂಬರ್ ENTRY ಮಾಡಿದ ನಂತರ ಕ್ಷೇಮ್‌ಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಮಲ್ಲೇಶ್ವರಂ, ಬೆಂಗಳೂರು ಇಲ್ಲಿ ಆಫ್‌ಲೈನ್ ವೆರಿಫಿಕೇಶನ್ ಗೆ ಎಲ್ಲಾ ಮೂಲ ದಾಖಲೆಗಳೊಂದಿಗೆ (ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ) ಈ ಕೆಳಗಿನ ವೇಳಾಪಟ್ಟಿಯಂತೆ ದಾಖಲಾತಿ ಪರಿಶೀಲನೆಗೆ ಖುದ್ದಾಗಿ ಹಾಜರಾಗಬೇಕು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read