HomeIndiaUGC NET ಪರೀಕ್ಷೆ ಅಕ್ರಮ: ಎಫ್ಐಆರ್ ದಾಖಲಿಸಿದ ಸಿಬಿಐ ತನಿಖೆ ಆರಂಭ

UGC NET ಪರೀಕ್ಷೆ ಅಕ್ರಮ: ಎಫ್ಐಆರ್ ದಾಖಲಿಸಿದ ಸಿಬಿಐ ತನಿಖೆ ಆರಂಭ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯದ ಉಲ್ಲೇಖದ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಯುಜಿಸಿ-ನೆಟ್ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ಇಂದು(ಜೂನ್ 20) ಪ್ರಥಮ ಮಾಹಿತಿ ವರದಿ(ಎಫ್‌ಐಆರ್) ದಾಖಲಿಸಿದೆ.

ಶಿಕ್ಷಣ ಸಚಿವಾಲಯವು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ನಡೆಸಿದ ವಿಶ್ವವಿದ್ಯಾಲಯ ಅನುದಾನ ಆಯೋಗ-ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಯುಜಿಸಿ-ನೆಟ್) ಪರೀಕ್ಷೆಯನ್ನು ರದ್ದುಗೊಳಿಸಿದೆ.

ಯುಜಿಸಿ ನೆಟ್-2024 ಅನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್‌ಟಿಎ) ಜೂನ್ 18 ರಂದು ಎರಡು ಪಾಳಿಯಲ್ಲಿ ನಡೆಸಿದೆ ಎಂದು ಆರೋಪಿಸಿ ನವದೆಹಲಿಯ ಶಾಸ್ತ್ರಿ ಭವನದ ಉನ್ನತ ಶಿಕ್ಷಣ ಇಲಾಖೆಯ ಶಿಕ್ಷಣ ಸಚಿವಾಲಯದ ಕಾರ್ಯದರ್ಶಿ ಕೆ. ಸಂಜಯ್ ಮೂರ್ತಿ ಅವರಿಂದ ಜೂನ್ 20 ರಂದು ಲಿಖಿತ ದೂರನ್ನು ಸ್ವೀಕರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular