ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿ.ಹೆಚ್.ಡಿ. ಕಡ್ಡಾಯವಲ್ಲ, ‘ನೆಟ್’ ಅರ್ಹತೆ ಸಾಕು: ಯುಜಿಸಿ ಮುಖ್ಯಸ್ಥ ಜಗದೀಶ್ ಕುಮಾರ್

ನವದೆಹಲಿ: ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಪಿ.ಹೆಚ್.ಡಿ. ಕಡ್ಡಾಯವಲ್ಲ ಎಂದು ಯುಜಿಸಿ ಮುಖ್ಯಸ್ಥ ಎಂ. ಜಗದೀಶ್ ಕುಮಾರ್ ತಿಳಿಸಿದ್ದಾರೆ.

ಉಸ್ಮಾನಿಯಾ ವಿವಿ ಕ್ಯಾಂಪಸ್ ನಲ್ಲಿ ಹೊಸದಾಗಿ ನಿರ್ಮಿಸಿದ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿ, ಕೇಂದ್ರೀಯ ವಿವಿಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆ -ನೆಟ್ ಪಡೆದರೆ ಸಾಕಾಗುತ್ತದೆ ಎಂದು ಹೇಳಿದ್ದಾರೆ.

ಸಹಾಯಕ ಪ್ರಾಧ್ಯಾಪಕರ ನೇಮಿಸಿಕೊಳ್ಳಲು ಪಿ.ಹೆಚ್.ಡಿ.ಯನ್ನು ಕನಿಷ್ಠ ಅರ್ಹತೆಯ ಮಾನದಂಡವನ್ನಾಗಿ ಮಾಡಲು ಆಯೋಗದ ನಿಯಮಗಳಿಗೆ ಕೇಂದ್ರ ಸರ್ಕಾರ ಈ ಹಿಂದೆ ತಿದ್ದುಪಡಿ ಮಾಡಿತ್ತು. 2021ರಲ್ಲಿ ಹೊಸ ಮಾರ್ಗಸೂಚಿ ಜಾರಿಗೆ ಬರಬೇಕಿತ್ತು, ಆದರೆ ಕೊರೋನಾ ಹಿನ್ನೆಲೆಯಲ್ಲಿ ಅದನ್ನು ಮುಂದೂಡಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read