BREAKING : ‘UGCET’ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಪ್ರಕಟ, ಈ ರೀತಿ ಚೆಕ್ ಮಾಡಿ |UGCET EXAM 2025

ಬೆಂಗಳೂರು : ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ದಿನಾಂಕ: 16.04.2025 ಮತ್ತು 17.04.2025 ರಂದು ಪರೀಕ್ಷೆಗಳನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಗಳ 16 ವರ್ಷನ್ಗಳ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ.

ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಒದಗಿಸಲಾದ https://cetonline.karnataka.gov.in/keaobjections/forms/login.aspx ಲಿಂಕ್ ಮೂಲಕ ಮಾತ್ರವೇ ದಿನಾಂಕ:22.04.2025 ಸಂಜೆ 5:00 ರೊಳಗೆ ಸಲ್ಲಿಸಬಹುದಾಗಿರುತ್ತದೆ.

ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೇ ಇರುವ ಅಥವಾ ಆಧಾರರಹಿತವಾಗಿರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ಪರಿಶೀಲಿಸಿ ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read