ಬೆಂಗಳೂರು : 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UGCET 2026) ಯನ್ನು ಏಪ್ರಿಲ್ 23 ಮತ್ತು 24ರಂದು ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.
2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (#UGCET-26) ಯನ್ನು ಏಪ್ರಿಲ್ 23 ಮತ್ತು 24ರಂದು ನಡೆಸಲಾಗುವುದು ಎಂದು ಡಾ.ಎಂ ಸಿ ಸುಧಾಕರ್ ಘೋಷಿಸಿದರು. ಹೊರನಾಡು ಮತ್ತು ಗಡಿ ನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.22ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜನವರಿ 17ರಿಂದ ಆರಂಭವಾಗಲಿದೆ. ಇದೇ ಸಂದರ್ಭದಲ್ಲಿ ಸಚಿವರು ಇತರ ಪರೀಕ್ಷೆಗಳ ವೇಳಾ ಪಟ್ಟಿಯನ್ನೂ ಪ್ರಕಟಿಸಿದರು. ಕ್ರೈಸ್ ಪರೀಕ್ಷೆ ಮಾರ್ಚ್ 1, ಪಿಜಿಸಿಇಟಿ (ಎಂಬಿಎ, ಎಂಸಿಎ) ಪರೀಕ್ಷೆ ಮೇ 14ರಂದು, ಪಿಜಿಸಿಇಟಿ (ಎಂಇ/ಎಂ.ಟೆಕ್) ಹಾಗೂ ಡಿಸಿಇಟಿ ಪರೀಕ್ಷೆಗಳು ಮೇ 23ರಂದು ನಡೆಯಲಿವೆ. ಎಂಎಸ್ಸಿ ನರ್ಸಿಂಗ್, ಎಂಪಿಟಿ, ಎಂ.ಎಸ್ಸಿ-ಎಎಚ್ ಎಸ್ ಪರೀಕ್ಷೆ ಗಳು ಜು.18ರಂದು, ಅಕ್ಟೋಬರ್ 11ರಂದು ಕೆಸೆಟ್ ಹಾಗೂ ನವೆಂಬರ್ 21ರಂದು ಎಂ-ಫಾರ್ಮಾ ಹಾಗೂ ಫಾರ್ಮಾ-ಡಿ ಪರೀಕ್ಷೆ ಗಳನ್ನು ನಡೆಸಲಾಗುವುದು ಎಂದು ಸಚಿವರು ಘೋಷಿಸಿದರು. ಈ ಸಂದರ್ಭದಲ್ಲಿ S ಪ್ರಕಾಶ್ ಪಾಟೀಲ್ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬು ಗೋಯಲ್, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ, ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಸೇರಿದಂತೆ ಇತರರು ಇದ್ದರು.
ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದ 2026ನೇ ಸಾಲಿನ ಸಿಇಟಿ ಪ್ರಕ್ರಿಯೆಗೆ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ 2026ನೇ ಸಾಲಿನ ಸಿಇಟಿ ಕುರಿತು ಮಾಹಿತಿ ನೀಡುವ ಸಿಇಟಿ ದಿಕ್ಸೂಚಿ ಕಿರು ಹೊತ್ತಿಗೆಯನ್ನು ಡಾ.ಎಂಸಿ ಸುಧಾಕರ್ ಹಾಗೂ ಎಸ್ ಪ್ರಕಾಶ್ ಪಾಟೀಲ್ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಶುಲ್ಕ ನಿಯಂತ್ರಣ ಸಮಿತಿ ಹಾಗೂ ಪ್ರವೇಶ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರ ನೂತನ ಕೊಠಡಿಗಳನ್ನು ಸಚಿವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬು ಗೋಯಲ್, ಕೆಇೆ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ, ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ, ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಶ್ರೀನಿವಾಸಗೌಡ, ಕೆಸೆಟ್ ಅಧ್ಯಕ್ಷ ಡಾ.ತಿಮ್ಮೇಗೌಡ ಇದ್ದರು.

