HomeJobsBREAKING : UGCET ಮೂರನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟ ; KEA...

BREAKING : UGCET ಮೂರನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟ ; KEA ಮಾಹಿತಿ

ಬೆಂಗಳೂರು: UGCET-2026ರ ಎಂಜಿನಿಯರಿಂಗ್, ಪಶುವೈದ್ಯಕೀಯ ಸೇರಿದಂತೆ ವಿವಿಧ ಕೋರ್ಸ್‌ಗಳ ಮೂರನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಇಂದು ಪ್ರಕಟವಾಗಿದೆ. ಸೀಟು ಪಡೆದ ಅಭ್ಯರ್ಥಿಗಳು ಸೆ.10ರೊಳಗೆ ಶುಲ್ಕ ಪಾವತಿಸಿ, ಸೆ.11ರೊಳಗೆ ಸಂಬಂಧಪಟ್ಟ ಕಾಲೇಜಿಗೆ ಕಡ್ಡಾಯವಾಗಿ ಪ್ರವೇಶ ಪಡೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೂಚಿಸಿದೆ.

ಸೀಟು ರದ್ದತಿಗೆ ಮನವಿ ಸಲ್ಲಿಸಿದರೂ ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ನಿಗದಿತ ಅವಧಿಯಲ್ಲಿ ಕಾಲೇಜಿಗೆ ಪ್ರವೇಶ ಪಡೆಯದ ಅಭ್ಯರ್ಥಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಐಎಎಸ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಕೆಇಎ ಪ್ರಕಟಣೆ ಹೊರಡಿಸಿದ್ದು, ‘ ಎಂಜಿನಿಯರಿಂಗ್, ಪಶು ವೈದ್ಯಕೀಯ ಸೇರಿದಂತೆ ಇತರ ಕೋರ್ಸ್ ಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಸೆ.10ರೊಳಗೆ ನಿಗದಿತ ಶುಲ್ಕ ಪಾವತಿಸಿ (ಪಾವತಿಸದೇ ಇದ್ದಲ್ಲಿ) ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸೆ.11ರೊಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು. ಇದು ಕಡ್ಡಾಯ ಪ್ರವೇಶ ಆಗಿದೆ. ಸೀಟು ರದ್ದತಿ ಕೋರಿ ಸಲ್ಲಿಸುವ ಮನವಿಗಳನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸುವುದಿಲ್ಲ. ಕಾಲೇಜಿಗೆ ಪ್ರವೇಶ ಪಡೆಯದೆ ಇರುವ ಅಭ್ಯರ್ಥಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟು ಹಂಚಿಕೆ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟು ಹಂಚಿಕೆಯ ಎರಡನೇ ಸುತ್ತಿಗೆ ಹೆಚ್ಚುವರಿಯಾಗಿ 150 ವೈದ್ಯಕೀಯ ಸೀಟು ಲಭ್ಯವಾಗಿದ್ದು, ಆಸಕ್ತರು ಸೆ.9ರವರೆಗೆ ಆಪ್ಷನ್ಸ್ ದಾಖಲಿಸಬಹುದು. ಬಾಗಲಕೋಟೆಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ 100 ಸೀಟು ಹಾಗೂ ಫಾರೂಕಿಯ ವೈದ್ಯಕೀಯ ಕಾಲೇಜಿಗೆ ಹೆಚ್ಚುವರಿಯಾಗಿ 50 ಸೀಟು ಲಭ್ಯವಾಗಿವೆ. ಬಾಗಲಕೋಟೆಯದು ಹೊಸ ಕಾಲೇಜಾಗಿರುವ ಕಾರಣ ಆ ಕಾಲೇಜಿಗೆ ಹೊಸದಾಗಿ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಎರಡನೇ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವವರು ಲಾಗಿನ್ ಆಗಿ ಒಪ್ಪಿಗೆ ಸೂಚಿಸಬೇಕು. ಆಪ್ಷನ್ಸ್ ಅದಲು- ಬದಲು‌ ಮಾಡಿಕೊಳ್ಳುವುದಕ್ಕೂ ಅವಕಾಶ ನೀಡಲಾಗಿದೆ. ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಚಾಯ್ಸ್-2 ಮತ್ತು ಚಾಯ್ಸ್-3 ಆಯ್ಕೆ‌ ಮಾಡಿರುವವರು ಹಾಗೂ ಸೀಟು ಹಂಚಿಕೆಯಾಗದಿರುವವರು ಈ ಸುತ್ತಿನಲ್ಲಿ ಭಾಗವಹಿಸಬಹುದು ಎಂದು ಕೆಇಎ ತಿಳಿಸಿದೆ.

ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಸೆ.7ರಿಂದ ಆರಂಭವಾಗಲಿದೆ.

ಮೊದಲನೇ ಸುತ್ತಿನಲ್ಲಿ ಚಾಯ್ಸ್-2 ಮತ್ತು ಚಾಯ್ಸ್- 3 ಆಯ್ಕೆ ಮಾಡಿರುವವರು, ಮೊದಲನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗದಿರುವವರು ಹಾಗೂ ಯುಜಿಸಿಇಟಿ ಎರಡನೇ ಸುತ್ತಿನ ನಂತರ ಚಾಯ್ಸ್-4 ಹಾಕಿ ಹೊರ ಹೋಗಿರುವವರು (ವೈದ್ಯಕೀಯ ಮತ್ತು ದಂತ ವೈದ್ಯಕೀಯ ಆಪ್ಷನ್ಸ್ ಇರುವವರು) ಈ ಸುತ್ತಿನಲ್ಲಿ ಭಾಗವಹಿಸಲು ಅರ್ಹರು.ಇವರು ಸೆ.7ರಂದು ಮಧ್ಯಾಹ್ನ 2ಗಂಟೆಯಿಂದ ಸೆ.9ರಂದು ಮಧ್ಯಾಹ್ನ 2ಗಂಟೆವರೆಗೆ ಪೋರ್ಟಲ್ ನಲ್ಲಿ ಲಾಗಿನ್ ಆಗಿ ಆಪ್ಷನ್ಸ್ ಸೇವ್ ಮಾಡಬೇಕು. ಇದರ ಬಳಿಕ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗುತ್ತದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular