HomeLatest NewsBREAKING: ಯುಜಿಸಿಇಟಿ ಇಂಜಿನಿಯರಿಂಗ್ ಸೇರಿ ವಿವಿಧ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ...

BREAKING: ಯುಜಿಸಿಇಟಿ ಇಂಜಿನಿಯರಿಂಗ್ ಸೇರಿ ವಿವಿಧ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: UGCET-25 ಇಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಹೆಚ್ಎಸ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ Options ದಾಖಲಿಸಲು KEA ತನ್ನ ವೆಬ್ ಸೈಟ್ ನಲ್ಲಿ ಲಿಂಕ್ ಬಿಟ್ಟಿದ್ದು, ಜುಲೈ 15ರವರೆಗೆ ಅವಕಾಶ ನೀಡಿದೆ.

ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ, ಬಿಎಸ್ ಸಿ ನರ್ಸಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ ಕೋರ್ಸ್ ಗಳ ಸೀಟ್ ಮ್ಯಾಟ್ರಿಕ್ಸ್, ಸಂಬಂಧಪಟ್ಟ ಇಲಾಖೆಗಳಿಂದ ಇನ್ನೂ ಬಂದಿಲ್ಲ. ಹೀಗಾಗಿ ಮ್ಯಾಟ್ರಿಕ್ಸ್ ಬಂದ ನಂತರ ಈ ಕೋರ್ಸ್ ಗಳ ಪ್ರವೇಶಕ್ಕೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು.

ಅಣಕು ಫಲಿತಾಂಶವನ್ನು ಜುಲೈ 19ರಂದು ಪ್ರಕಟಿಸಲಾಗುವುದು. ಅದರ ಬಳಿಕ ಆದ್ಯತೆಗಳನ್ನು ಅದಲು- ಬದಲು ಮಾಡಿಕೊಳ್ಳಲು ಜು.22ರವರೆಗೆ ಅವಕಾಶ ಇರುತ್ತದೆ. ಜುಲೈ 25ರಂದು ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭ್ಯರ್ಥಿಗಳು ಸೀಟ್ ಮ್ಯಾಟ್ರಿಕ್ಸ್ ನೋಡಿಕೊಂಡು ಇಚ್ಛೆ/ ಆಯ್ಕೆಗಳನ್ನು ದಾಖಲಿಸುವಾಗ ಆದ್ಯತಾ ಕ್ರಮಗಳನ್ನು ಅನುಸರಿಸಬೇಕು. ಈ ಕುರಿತ ಹೆಚ್ಚಿನ ವಿವರಗಳಿಗೆ ಯುಜಿಸಿಇಟಿ-25 ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬೇಕು. ಅಲ್ಲದೆ, ಕೆಇಎ ವಿಕಸನ ಯೂಟ್ಯೂಬ್ ಚಾನಲ್ ನಲ್ಲಿ ಇರುವ ವಿಡಿಯೊ ಕೂಡ ನೋಡಬಹುದು.

ಪಶು ವೈದ್ಯಕೀಯ ಮತ್ತು ಪಶು ಸಂಗೋಪನೆ, ಕೃಷಿ ವಿಜ್ಞಾನ ಕೋರ್ಸ್ ಗಳಲ್ಲಿ ಪ್ರಾಕ್ಟಿಕಲ್ Rank ಪಡೆದಿರುವ ಅಭ್ಯರ್ಥಿಗಳು, ಪ್ರಾಕ್ಟಿಕಲ್ ಮತ್ತು ರೆಗ್ಯುಲರ್ ಸೀಟುಗಳಿಗೆ ಪ್ರತ್ಯೇಕವಾಗಿಯೇ ಆಪ್ಷನ್ಸ್ ದಾಖಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular