ಬೆಂಗಳೂರು: UGNEET-26 ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಪರಿಷ್ಕೃತ ಎರಡನೇ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.
ಸೆ. 11 ರಂದು ಪ್ರಕಟಿಸಿದ ತಾತ್ಕಾಲಿಕ ಫಲಿತಾಂಶದ ನಂತರ ಸೀಟು ಹಂಚಿಕೆಯಾದವರು ಇಷ್ಟ ಇಲ್ಲದಿದ್ದರೆ ಚಾಯ್ಸ್-4 ಆಯ್ಕೆ ಮಾಡಿಕೊಂಡು ಕೌನ್ಸೆಲಿಂಗ್ ನಿಂದ ಹೊರ ಹೋಗುವುದಕ್ಕೆ ಸೆ.14ರವರೆಗೆ ಅವಕಾಶ ನೀಡಲಾಗಿತ್ತು.
ಬಳಿಕ ಸೀಟು ಹಂಚಿಕೆಯನ್ನು ಪುನಃ ರೀ ರನ್ ಮಾಡಿ ಫಲಿತಾಂಶ ಪ್ರಕಟಿಸಿದ್ದು ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಸೆ.16ರಂದು ಬೆಳಿಗ್ಗೆ 9ಗಂಟೆಯೊಳಗೆ ಇ-ಮೇಲ್ ([email protected]) ಮೂಲಕ ಸಲ್ಲಿಸಬಹುದು. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶ
PGCET-2026: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಸೆ.17ರಂದು ಬೆಳಿಗ್ಗೆ 9ಗಂಟೆವರೆಗೆ ಸಮಯ ನೀಡಲಾಗಿದೆ.
ಸೆ.17ರಂದು ಸಂಜೆ 6ರ ನಂತರ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ. ಅವಶ್ಯ ಇದ್ದಲ್ಲಿ ಆಯ್ಕೆಗಳನ್ನು ಅದಲು-ಬದಲು ಮಾಡಿಕೊಳ್ಳುವುದಕ್ಕೆ ಅಥವಾ ಹೊಸದಾಗಿ ಹಾಕಿಕೊಳ್ಳುವುದಕ್ಕೆ ಹಾಗೂ ತೆಗೆದುಹಾಕುವುದಕ್ಕೆ ಸೆ.19ರಂದು ಬೆಳಿಗ್ಗೆ 11ರವರೆಗೆ ಅವಕಾಶ ನೀಡಲಾಗಿದೆ.
ಸೆ.19ರಂದು ಸಂಜೆ 5ಕ್ಕೆತಾತ್ಕಾಲಿಕ ಹಾಗೂ ಸೆ.21ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೆ.22ರಿಂದ 24ರವರೆಗೆ ಚಾಯ್ಸ್ ಆಯ್ಕೆಗೆ ಅವಕಾಶ ನೀಡಲಾಗಿದೆ. ಚಾಯ್ಸ್ 1 ಮತ್ತು 2 ಆಯ್ಕೆ ಮಾಡಿದವರು ಸೆ.25ರೊಳಗೆ ಶುಲ್ಕ ಪಾವತಿಸಬೇಕು. ಚಾಯ್ಸ್ – 1 ಆಯ್ಕೆ ಮಾಡಿದವರು ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸೆ.26ರೊಳಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ತಿಳಿಸಲಾಗಿದೆ.
ಸೆ.18 ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ಇವರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ದಿನಾಂಕ : 18-09-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಅಪೋಲೋ ಫಾರ್ಮಸಿ ಪ್ರೈ. ಲಿ.’ ಹಾಗೂ ‘ಮುತ್ತೂಟ್ ಮೈಕ್ರೋ ಫಿನ್ ಪ್ರೈ.ಲಿ.’ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.
ಶೈಕ್ಷಣಿಕ ಅರ್ಹತೆ: ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ 18 ರಿಂದ 35 ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.ಉಚಿತ ಪ್ರವೇಶವಿದ್ದು,
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606/9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

