HomeKarnatakaವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ:...

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ: 656 ಸೀಟು ಬಾಕಿ

ಬೆಂಗಳೂರು: UGNEET-26: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಅ.10ರೊಳಗೆ ಶುಲ್ಕ ಪಾವತಿಸಿ, ಅ.11ರೊಳಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು.

ಈ ಹಿಂದೆ ಪಾವತಿಸಿದ್ದ ಶುಲ್ಕ ಮತ್ತು ಕಾಷನ್ ಡೆಪಾಸಿಟ್ ಅನ್ನು ಈ ಸುತ್ತಿನ ಶುಲ್ಕಕ್ಕೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು, ಮೂಲ ದಾಖಲೆಗಳ ಸಮೇತ ಹೋಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು.

ಒಟ್ಟು 12,010 ವೈದ್ಯಕೀಯ ಸೀಟುಗಳ ಪೈಕಿ ಇದುವರೆಗೂ 11,354 ಸೀಟು ಹಂಚಿಕೆಯಾಗಿ ಇನ್ನೂ‌ 656 ಸೀಟು ಬಾಕಿ ಉಳಿದಿವೆ. ದಂತ ವೈದ್ಯಕೀಯ ಕೋರ್ಸ್ ನಲ್ಲಿ ಎಲ್ಲ 2,689 ಸೀಟೂ ಹಂಚಿಕೆಯಾಗಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಆಯುರ್ವೇದ ಮತ್ತು ಹೋಮಿಯೋಪತಿ ಕೋರ್ಸ್

UGNEET-26: ಆಯುರ್ವೇದ ಮತ್ತು ಹೋಮಿಯೋಪತಿ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಆಪ್ಷನ್ಸ್ ದಾಖಲಿಸಲು ಅ.7ರಂದು ಮಧ್ಯಾಹ್ಬ 2 ಗಂಟೆಯಿಂದ ಅ.12ರಂದು ಬೆಳಿಗ್ಗೆ 11ಗಂಟೆವರೆಗೆ ಅವಕಾಶ ನೀಡಲಾಗಿದೆ.

ಯುಜಿ ನೀಟ್ ರಾಂಕ್ ಇರುವ ಅರ್ಹರು ಆಪ್ಷನ್ಸ್ ದಾಖಲಿಸಬಹುದು. ವೈದ್ಯಕೀಯ ಕೋರ್ಸ್ ಗೆ ಪ್ರವೇಶ ಪಡೆದಿರುವ ಹಾಗೂ 3ನೇ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾಗಿರುವವರು ಆಯುಷ್ ಕೌನ್ಸೆಲಿಂಗ್ ನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ.

ಈಗಾಗಲೇ ಅರ್ಜಿ ಸಲ್ಲಿಸಿ, ವೆರಿಫಿಕೇಷನ್ ಸ್ಲಿಪ್ ಹೊಂದಿರುವ ಅಭ್ಯರ್ಥಿಗಳು ಮಾತ್ರ ಆಪ್ಷನ್ಸ್ ದಾಖಲಿಸಬಹುದು.

ಸೀಟು ಹಂಚಿಕೆಯಾಗಿ ಈಗಾಗಲೇ ವಿವಿಧ ಕೋರ್ಸ್ ಗಳಿಗೆ ಪ್ರವೇಶ ಪಡೆದಿರುವ ಅಭ್ಯರ್ಥಿಗಳು ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜುಗಳಲ್ಲಿ ದಾಖಲೆ ಪಡೆಯುವುದನ್ನು ಖಾತರಿಪಡಿಸಿಕೊಂಡ ನಂತರವೇ ಆಪ್ಷನ್ಸ್ ದಾಖಲಿಸುವ ಕೆಲಸ ಮಾಡಿ. ಆಪ್ಷನ್ಸ್ ದಾಖಲಿಸಿ, ಸೀಟು ಹಂಚಿಕೆ ನಂತರ ದಾಖಲೆ ಇಲ್ಲದೆ ಪರದಾಡಬೇಡಿ. ಒಮ್ಮೆ ಆಯುಷ್ ಸೀಟು ಹಂಚಿಕೆ ನಂತರ ಹಿಂದಿನ ಸೀಟು ತನ್ನಿಂದಾನೆ ರದ್ದಾಗಲಿದೆ.

ವಿವರಗಳಿಗೆ ಕೆಇಎ ವೆಬ್ ಸೈಟ್ ನೋಡಿ.

ಪೋಷಣ್ ಅಭಿಯಾನ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

 ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ  ಯೋಜನೆಯಡಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಗೌರವಧನ ಆಧಾರದ ಮೇಲೆ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಹಾಗೂ ಜಿಲ್ಲಾ ಕಾರ್ಯಕ್ರಮ ಸಹಾಯಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 ಆಸಕ್ತ ಅಭ್ಯರ್ಥಿಗಳು ಸದರಿ ನೇಮಕಾತಿಯು 12 ತಿಂಗಳ ಅವಧಿಯಾಗಿದ್ದು, ಕೆಲಸ ನಿರ್ವಹಣೆಯ ಆಧಾರದ ಮೇರೆಗೆ ಹುದ್ದೆಯನ್ನು ಜಿಲ್ಲಾ ಸಮಿತಿ ಅನುಮೋದನೆ ಮೇರೆಗೆ ಮುಂದಿನ ಅವಧಿಗೆ ಮುಂದುವರಿಸಲಾಗುವುದು ಮೇರೆಗೆ ಭರ್ತಿ ಮಾಡಿಕೊಳ್ಳಲಾಗುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರ ಹುದ್ದೆಗೆ 30,000 ಹಾಗೂ ಜಿಲ್ಲಾ ಕಾರ್ಯಕ್ರಮ ಸಾಹಿತ್ಯ ಹುದ್ದೆಗೆ 18 ಸಾವಿರ ಮಾಸಿಕ ವೇತನವಾಗಿ ನೀಡಲಾಗುವುದು.

ಅಭ್ಯರ್ಥಿಗಳ ವಯೋಮಿತಿಯು ಕನಿಷ್ಟ 21 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು ಸದರಿ ಯೋಜನೆಯು ಕೇಂದ್ರ ಪರಿಸ್ಕೃತ ಯೋಜನೆಯಾಗಿರುವುದರಿಂದ ಕನ್ನಡ ಮತ್ತು ಇಂಗ್ಲಿಷ್ ಅಥವಾ ಭಾಷಾಜ್ಞಾನ ಅಗತ್ಯವಾಗಿರುತ್ತದೆ.

 ಸದರಿ ಹುದ್ದೆಗೆ ಯಾವುದೇ ಮೀಸಲಾತಿ ಅನ್ವಯಿಸುವುದಿಲ್ಲ ಅಭ್ಯರ್ಥಿಗಳ ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

 ಅರ್ಜಿ  ನಮೂನೆಯನ್ನು    ಉಪ ನಿರ್ದೇಶಕರ ಕಚೇರಿ,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,  ಸುಧಾರಣಾ ಸಂಸ್ಥೆಗಳ ಸಂಕೀರ್ಣ,  ಡಾ. ಎಂ.ಎಚ್. ಮರಿಗೌಡ ರಸ್ತೆ,  ಇಲ್ಲಿ ಪಡೆದು,  ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ  ಅರ್ಜಿಯನ್ನು ಆಕ್ಟೋಬರ್ 29 . 2026  ರೊಳಗೆ   ಇದೇ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ 080-29578688 ಅಥವಾ ಇ-ಮೇಲ್ [email protected]  ಅನ್ನು  ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ  ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular