HomeKarnatakaವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆ ಆರಂಭ

ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆ ಆರಂಭ

ಬೆಂಗಳೂರು: UGNEET-26: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಿದ್ದು, ಬ್ಯಾಂಕ್ ಮುಷ್ಕರ ಇರುವ ಕಾರಣ Caution Deposit ಕಟ್ಟಲು ಅಕ್ಟೋಬರ್ 1ರವರೆಗೆ ದಿನಾಂಕ ವಿಸ್ತರಿಸಲಾಗಿದೆ.

ಆಪ್ಷನ್ಸ್ ದಾಖಲಿಸುವ ದಿನಾಂಕವನ್ನೂ ಅ.1ರವರೆಗೆ ವಿಸ್ತರಿಸಲಾಗಿದೆ.

ಇದುವರೆಗೂ ಯಾವುದೇ ಸೀಟು ಹಂಚಿಕೆಯಾಗದಿರುವವರು, ಸೀಟು ಹಂಚಿಕೆ ನಂತರ ದಂಡ ಪಾವತಿಸಿ ರದ್ದು ಪಡಿಸಿಕೊಂಡವರು, ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಚಾಯ್ಸ್-4 ಆಯ್ಕೆ ಮಾಡಿ ಹೊರ ಹೋಗಿರುವವರು, ಎರಡನೇ ಸುತ್ತಿನ ಅಂತಿಮ ಫಲಿತಾಂಶಕ್ಕೂ ಮೊದಲು quit ಮಾಡಿಕೊಂಡ ಅಭ್ಯರ್ಥಿಗಳು 3ನೇ ಸುತ್ತಿನಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟಿಗೆ ಈಗಾಗಲೇ ಪ್ರವೇಶ ಪಡೆದಿರುವ ಅಭ್ಯರ್ಥಿಗಳು Up-Gradation ಮಾಡಿಕೊಳ್ಳಲು ಆಸಕ್ತಿ ಇದ್ದಲ್ಲಿ ಅವರು ಕೂಡ ಭಾಗಬಹಿಸಬಹುದು.

ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಯಾವುದೇ ಚಾಯ್ಸ್ ದಾಖಲಿಸದಿರುವವರು ಈ ಸುತ್ತಿನಲ್ಲಿ ಭಾಗವಹಿಸಲು ಅರ್ಹರಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಎಂಬಿಎ, ಎಂಸಿಎ ಕೋರ್ಸ್ ಪ್ರವೇಶ

PGCET-2026: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.

ಒಟ್ಟು 23,164 ಸೀಟು ಈ ಸುತ್ತಿನಲ್ಲಿ ಹಂಚಿಕೆಯಾಗಿವೆ. ಎಂಬಿಎ ಕೋರ್ಸ್ ಗೆ 11,462 ಹಾಗೂ ಎಂಸಿಎ ಕೋರ್ಸ್ ಗೆ 8,093 ಮತ್ತು ಎಂ.ಟೆಕ್ ಕೋರ್ಸ್ ಗೆ 3,609 ಸೀಟು ಹಂಚಿಕೆಯಾಗಿವೆ.

ಎಂಸಿಎ ನಲ್ಲಿ 9,574, ಎಂಬಿಎ ನಲ್ಲಿ 2,195 ಹಾಗೂ ಎಂ.ಟೆಕ್ ನಲ್ಲಿ 1,821 ಸೀಟು ಹಂಚಿಕೆಯಾಗದೆ ಉಳಿದಿವೆ.

ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಒಂದೆರಡು ದಿನಗಳಲ್ಲಿ ಪ್ರಕಟಿಸಲಾಗುತ್ತದೆ.

KSRP ಪರೀಕ್ಷೆ ಫಲಿತಾಂಶ

KSRP ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು KEA ಶುಕ್ರವಾರ ಪ್ರಕಟಿಸಿದೆ.

ಆಕ್ಷೇಪಣೆಗಳು ಇದಲ್ಲಿ ಸೆ.27ರೊಳಗೆ ನಿಗದಿತ ಲಿಂಕ್‌ ಮೂಲಕ ಸಲ್ಲಿಸಬಹುದು. ದಾಖಲೆ ಅವಧಿ ಅಂದರೆ ಪರೀಕ್ಷೆ ನಡೆದು ಐದು ದಿನಗಳಲ್ಲಿಯೇ ಫಲಿತಾಂಶ ಪ್ರಕಟಿಸಲಾಗಿದೆ. ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ OMR ಉತ್ತರ ಪತ್ರಿಕೆಗಳನ್ನು KEA ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಲಾಗಿತ್ತು.

ಸೆ. 28 ಮತ್ತು 29 ರಂದು ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆಯ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 28 ಮತ್ತು 29 ರಂದು ರೈತರಿಗೆ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಈ ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಸೀಮಿತವಾಗಿದ್ದು, ಒಟ್ಟು 30 ಜನ ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದಾವಣಗೆರೆಯ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರದ ದೂರವಾಣಿ ಸಂಖ್ಯೆ: 08192-233787 ಅನ್ನು ಸಂಪರ್ಕಿಸಬಹುದು ಎಂದು ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular