HomeKarnatakaನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಶಾಮನೂರು ಪ್ರಮಾಣವಚನ ಸ್ವೀಕಾರ

ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಶಾಮನೂರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನಸಭೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ನ ಉಮೇಶ್ ಮೇಟಿ ಹಾಗೂ ಸಮರ್ಥ್ ಶಾಮನೂರು ನೂತನ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಯ್ಕೆಯಾದ ಶಾಸಕರು ಇಂದು ಅಧಿಕೃತವಾಗಿ ಪದಗ್ರಹಣ ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಶಾಸಕರು ಶಾಸನಬದ್ಧವಾಗಿ ಪ್ರಮಾಣವಚನ ಸ್ವೀಕರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್‌ ಶಾಮನೂರು ಅವರಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ನೂತನ ಶಾಸಕರಿಗೆ ಸ್ಪೀಕರ್ ಖಾದರ್ ಶುಭ ಕೋರಿದರು.

ಈ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ, ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ, ಮಾಜಿ ಸಚಿವ ಎಸ್.ಆರ್. ಪಾಟೀಲ್ ಹಾಗೂ ವಿಧಾನಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular