HomeLatest NewsSHOCKING : ಯುವತಿಯ ಕಿರುಕುಳ ತಾಳಲಾರದೇ 'ಸೆಲ್ಪಿ ವಿಡಿಯೋ' ಮಾಡಿಟ್ಟು ಬೆಂಗಳೂರಲ್ಲಿ ಯುವಕ ಆತ್ಮಹತ್ಯೆ.!

SHOCKING : ಯುವತಿಯ ಕಿರುಕುಳ ತಾಳಲಾರದೇ ‘ಸೆಲ್ಪಿ ವಿಡಿಯೋ’ ಮಾಡಿಟ್ಟು ಬೆಂಗಳೂರಲ್ಲಿ ಯುವಕ ಆತ್ಮಹತ್ಯೆ.!

ಬೆಂಗಳೂರು : ಯುವತಿಯ ಕಿರುಕುಳ ತಾಳಲಾರದೇ ಸೆಲ್ಪಿ ವಿಡಿಯೋ ಮಾಡಿಟ್ಟು ಬೆಂಗಳೂರಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೂನ್ 13 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರಾಜಘಟ್ಟ ಕೆರೆಯ ಬಳಿ ಘಟನೆ ನಡೆದಿದೆ. ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿದ ಯುವಕ-ಯುವತಿಯ ಮೋಸ ಮಾಡಿದ ಬಗ್ಗೆ ಬಿಚ್ಚಿಟ್ಟಿದ್ದಾನೆ. ದೊಡ್ಡಬಳ್ಳಾಪುರದ ಮಂಜುನಾಥ್ ಎಂಬ ಯುವಕ ರಾಜಘಟ್ಟ ಕೆರೆಯ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಷದ ಮಾತ್ರೆಗಳನ್ನು ಸೇವಿಸಿ ಯುವಕ ಸೂಸೈಡ್ ಮಾಡಿಕೊಂಡಿದ್ದಾನೆ.

ಯುವತಿ ನನ್ನನ್ನು ನಂಬಿಸಿ ಮೋಸ ಮಾಡಿದ್ದಾಳೆ. ನಾನು ಅವಳ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದೆ, ಆದರೂ ಆಕೆಯನ್ನು ನಾನು ಮದುವೆಯಾಗಲು ನಿರ್ಧರಿಸಿದ್ದೆ, ಎಂದು ಆತ ವಿಡಿಯೋದಲ್ಲಿ ಹೇಳಿದ್ದಾನೆ. ಅಲ್ಲದೇ ಆಕೆಗೆ ಬೇರೋಬ್ಬನ ಜೊತೆಯಲ್ಲಿ ಸಂಬಂಧವಿದೆ ಎಂದು ಯುವಕ ವಿಡಿಯೋದಲ್ಲಿ ಆರೋಪಿಸಿದ್ದಾನೆ. ನನ್ನ ಸಾವಿಗೆ ನಾನು ಪ್ರೀತಿಸಿದ ಯುವತಿಯೇ ಕಾರಣ ಎಂದು ಯುವಕ ಸೆಲ್ಫಿ ವಿಡಿಯೋ ಮಾಡಿ ಸೂಸೈಡ್ ಮಾಡಿಕೊಂಡಿದ್ದಾನೆ. ನನ್ನ ಸಾವಿಗೆ ಯುವತಿ ಹಾಗೂ ಅವರ ಮನೆಯವರೇ ಕಾರಣ ಎಂದು ಯುವಕ ವಿಡಿಯೋದಲ್ಲಿ ಹೇಳಿದ್ದಾನೆ .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಜುನಾಥ್ ರನ್ನು ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಆತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular