ಬೆಂಗಳೂರು : ಅತಿಯಾದ ಕೆಲಸದ ಒತ್ತಡ ತಾಳಲಾರದೇ ಓಲಾ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಪದವೀಧರರಾದ ನಿಖಿಲ್ ಸೋಮವಂಶಿ ಮೃತರು. ಕೋರಮಂಗಲ ಭಾಗದಲ್ಲಿರುವ ಓಲಾದ AI ಘಟಕದಲ್ಲಿ ನಿಖಿಲ್ ಸೋಮವಂಶಿ ಮೆಷಿನ್ ಲರ್ನಿಂಗ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸದ ಒತ್ತಡ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಿಖಿಲ್ ಸೋಮವಂಶಿ ಆಗಸ್ಟ್ 2024 ರಲ್ಲಿ ಕೆಲಸಕ್ಕೆ ಸೇರಿದ್ದರು. ಅವರು ವರ್ಷಕ್ಕೆ 9.30 ಲಕ್ಷ ರೂ. ವೇತನ ಪಡೆದುಕೊಳ್ಳುತ್ತಿದ್ದರು. ಆದರೆ, ಅಮೆರಿಕದಲ್ಲಿರುವ ಮ್ಯಾನೇಜರ್ ರಾಜ್ಕಿರಣ್ ಪನುಗಂಟಿ ಎಂಬುವವರು ನಿರಂತರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಹಲವಾರು ನೌಕರರು ಕೆಲಸ ಬಿಟ್ಟಿದ್ದರು. ನಂತರ ಅವರ ಕೆಲಸವನ್ನೂ ನಿಖಿಲ್ ಒಬ್ಬರೇ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.ಕೆಲಸದ ಒತ್ತಡ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ
.