ಲೈಂಗಿಕ ದೌರ್ಜನ್ಯ ಎಸಗಿದ ಚಿಕ್ಕಪ್ಪನಿಗೆ ಜೀವಾವಧಿ ಶಿಕ್ಷೆ

ಕಲಬುರಗಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಸಾಬೀತಾಗಿದ್ದರಿಂದ ಬಾಲಕಿಯ ಚಿಕ್ಕಪ್ಪನಿಗೆ ಜೀವಾವಧಿ ಶಿಕ್ಷೆ ಮತ್ತು 30,000 ರೂ. ದಂಡ ವಿಧಿಸಿ ಅಪರ ಜಿಲ್ಲಾ ಮತ್ತು ಸತ್ರ(ವಿಶೇಷ ಪೋಕ್ಸೋ)ನ್ಯಾಯಾಲಯ FTSC-1 ಆದೇಶಿಸಿದೆ.

ವಿಶ್ವವಿದ್ಯಾಲಯ ಠಾಣಾ ವ್ಯಾಪ್ತಿಯ ಫೈಲ್ ತಾಂಡಾ ನಂದೂರ -ಕೆ ನಿವಾಸಿಯಾಗಿರುವ 19 ವರ್ಷದ ಯುವಕ ಶಿಕ್ಷೆಗೆ ಒಳಗಾಗಿದ್ದಾನೆ. 2024ರ ಆಗಸ್ಟ್ 9ರಂದು ಅಪ್ರಾಪ್ತೆಯನ್ನು ಮನೆ ಮಾಳಿಗೆ ಮೇಲೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಆತನ ತಂದೆ ಬಾಲಕಿಯ ಪೋಷಕರಿಗೆ ನಿಮ್ಮ ಮಗಳನ್ನು ನನ್ನ ಮಗನಿಗೆ ಮದುವೆ ಮಾಡಿಕೊಡಿ ಎಂದಿದ್ದು, ಬಾಲಕಿ ಪೋಷಕರು ನಿನ್ನ ಮಗ ನನ್ನ ಮಗಳಿಗೆ ಚಿಕ್ಕಪ್ಪ ಆಗುತ್ತಾನೆ ಎಂದಿದ್ದಾರೆ. ಈ ವಿಷಯಕ್ಕೆ ಗಲಾಟೆ ನಡೆದಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಅಪರಾಧಿಯನ್ನು ಬಂಧಿಸಿದಾಗ ತಪ್ಪು ಒಪ್ಪಿಕೊಂಡಿದ್ದಾನೆ.

ತನಿಖೆ ನಡೆಸಿದ ಪೊಲೀಸರು ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಯಮನಪ್ಪ ಬಮ್ಮಣಗಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶಾಂತವೀರ ಬಿ ತುಪ್ಪದ ಅವರು ವಾದ ಮಂಡಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read