ವಿಜಯನಗರ : ನಾಪತ್ತೆಯಾದ ಪ್ರೇಮಿಗಳು ಶವವಾಗಿ ಪತ್ತೆಯಾದ ಘಟನೆ ಹರಪನಹಳ್ಳಿಯಲ್ಲಿ ನಡೆದಿದೆ.
ಮದನ ಸ್ವಾಮಿ, ದೀಪಿಕಾ ಎಂಬ ಜೋಡಿ ಮರದ ರೆಂಬೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕೊಳೆಯ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಮದನ ಸ್ವಾಮಿ (18) ದೀಪಿಕಾ (18) ಫಲಿತಾಂಶ ಪ್ರಕಟವಾದ ದಿನದಿಂದ ನಾಪತ್ತೆಯಾಗಿದ್ದರು. ಇಬ್ಬರು ಕೂಡ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು. ಆದರೆ ರಿಸಲ್ಟ್ ದಿನದಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಎಲ್ಲಿ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇದೀಗ ಕಾಡೊಂದರಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಒಂದೇ ಮರದ ರೆಂಬೆಗೆ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸೂಸೈಡ್ ಗೆ ನಿಖರ ಕಾರಣ ತಿಳಿದು ಬಂದಿಲ್ಲ.
You Might Also Like
TAGGED:ನೇಣು ಬಿಗಿದುಕೊಂಡು ಆತ್ಮಹತ್ಯೆ.!