ಬೆಂಗಳೂರು: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಏಕೀಕೃತ ಆಸ್ತಿ ತೆರಿಗೆ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ, ಆಸ್ತಿ ನಿರ್ವಹಣೆಗೆ ದಿ ಎಸ್ಟೇಟ್ ಮ್ಯಾನೇಜ್ಮೆಂಟ್ ರೂಲ್ಸ್ -2026 ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಏಕೀಕೃತ ಆಸ್ತಿ ತೆರಿಗೆ ತಂತ್ರಾಂಶದೊಂದಿಗೆ ಇ- ಆಸ್ತಿ ತಂತ್ರಾಶವನ್ನು ಸಂಯೋಜಿಸಲಾಗುವುದು. ತೆರಿಗೆ ಬೇಡಿಕೆ ಮತ್ತು ಬಾಕಿ ವಿವರಗಳನ್ನು ಸೂಚಿಸುವ ಯೂನಿಫೈಡ್ ಪ್ರಾಪರ್ಟಿ ಟ್ಯಾಕ್ಸ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ನಗರ ಸ್ಥಳೀಯ ಸಂಸ್ಥೆಗಳ ಸ್ಥಿರಾಸ್ತಿಗಳು ಮತ್ತು ವಾಣಿಜ್ಯ ಸಂಕೀರ್ಣಗಳ ನಿರ್ವಹಣಾ ಪ್ರಕ್ರಿಯೆ ಸರಳಗೊಳಿಸಲು ಏಕರೂಪದ ನೀತಿಯನ್ನು ಪಾಲಿಸಲು ದಿ ಎಸ್ಟೇಟ್ ಮ್ಯಾನೇಜ್ಮೆಂಟ್ ರೂಲ್ಸ್ -2026 ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

