BREAKING NEWS: ಮುಂಗಾರು ಅಧಿವೇಶನದಲ್ಲೇ ‘ಏಕರೂಪ ನಾಗರಿಕ ಸಂಹಿತೆ’ ಮಸೂದೆ ಮಂಡನೆ

ಮಹತ್ವದ ಬೆಳವಣಿಗೆ ಒಂದರಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಚರ್ಚೆಗೆ ಒಳಗಾಗಿರುವ ‘ಏಕರೂಪ ನಾಗರಿಕ ಸಂಹಿತೆ’ (Uniform civil code) ಮಸೂದೆಯನ್ನು ಮುಂದಿನ ತಿಂಗಳು ನಡೆಯಲಿರುವ ಸಂಸತ್ತಿನ ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಮುಂದಿನ ವರ್ಷ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಅದಕ್ಕೂ ಮುನ್ನ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಅಂಗೀಕರಿಸುವ ಮೂಲಕ ದೇಶದ ಜನರ ವಿಶ್ವಾಸ ಗಳಿಸುವ ಪ್ರಯತ್ನದಲ್ಲಿ ಬಿಜೆಪಿ ಇದ್ದು, ಆದರೆ ಬಹುತೇಕ ಪ್ರತಿಪಕ್ಷಗಳು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆ.

ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು, ಏಕರೂಪ ನಾಗರಿಕ ಸಂಹಿತೆ ಮಹತ್ವದ ಕುರಿತು ಬಹಿರಂಗವಾಗಿಯೇ ಪ್ರತಿಪಾದಿಸಿದ್ದು, ಇದು ಜಾರಿಗೆ ಬಂದರೆ ಸುಗಮ ಆಡಳಿತ ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ಇನ್ನು ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತಂತೆ ಜೂನ್ 14ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಸಾರ್ವಜನಿಕರಿಂದ ಅಭಿಪ್ರಾಯ ಕೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read