HomeKarnatakaಗ್ರಾಹಕರ ಅನುಮತಿ ಇಲ್ಲದೇ ಖಾತೆಯಿಂದ ಹಣ ಕಡಿತ: ಬ್ಯಾಂಕ್ ಗೆ ದಂಡ

ಗ್ರಾಹಕರ ಅನುಮತಿ ಇಲ್ಲದೇ ಖಾತೆಯಿಂದ ಹಣ ಕಡಿತ: ಬ್ಯಾಂಕ್ ಗೆ ದಂಡ

ಗ್ರಾಹಕರ ಖಾತೆಯಿಂದ ಹಣ ಕಡಿತ ಪ್ರಕರದಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ಶಿವಮೊಗ್ಗ ಗ್ರಾಹಕ ಆಯೋಗ ದಂಡ ವಿಧಿಸಿದೆ.

ಗ್ರಾಹಕರ ಅನುಮತಿಯಿಲ್ಲದೆ ಖಾತೆಯಿಂದ ಹಣ ಕಡಿತಗೊಂಡು, ದೂರು ನೀಡಿದರೂ ಬಾಕಿ ಹಣ ಹಿಂತಿರುಗಿಸದೆ ಸೇವಾ ನ್ಯೂನತೆ ಎಸಗಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿರುದ್ಧ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ತೀರ್ಪು ನೀಡಿದ್ದು, ಬಡ್ಡಿ ಸಮೇತ ಹಣ ಪಾವತಿಸಲು ಮತ್ತು ದಂಡ ವಿಧಿಸಿ ಆದೇಶಿಸಿದೆ.

ಪ್ರಕರಣದ ವಿವರ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ ನಗರದ ನಂದಿನಿ ಬಡಾವಣೆಯ ನಿವಾಸಿ ಜೂಲಿ ಎಸ್.ಪಿ. ಅವರು ವಿನೋಬನಗರದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಉಳಿತಾಯ ಖಾತೆ ಹೊಂದಿದ್ದರು. 2024 ರ ಮೇ 3, ರಂದು ಅವರ ಖಾತೆಯಿಂದ ಮೂರು ಬಾರಿ ವ್ಯವಹಾರ ನಡೆದು ಒಟ್ಟು ರೂ.7,00,000 ಕಡಿತವಾಗಿರುವ ಬಗ್ಗೆ ಮೊಬೈಲ್‌ಗೆ ಸಂದೇಶ ಬಂದಿತ್ತು. ತಾವು ಯಾವುದೇ ಒಟಿಪಿ ಹಂಚಿಕೊಳ್ಳದಿದ್ದರೂ ಹಾಗೂ ಯಾವುದೇ ವ್ಯವಹಾರ ಮಾಡದಿದ್ದರೂ ಹಣ ಕಡಿತವಾಗಿದ್ದರಿಂದ, ದೂರುದಾರರು ತಕ್ಷಣವೇ ಬ್ಯಾಂಕ್ ವ್ಯವಸ್ಥಾಪಕರನ್ನು ಸಂಪರ್ಕಿಸಿ ಹಣ ಮರುಜಮೆ ಮಾಡುವಂತೆ ಮನವಿ ಮಾಡಿದ್ದರು.

ಬ್ಯಾಂಕ್‌ ಕಡೆಯಿಂದ ಸೂಕ್ತ ಸ್ಪಂದನೆ ಸಿಗದಿದ್ದಾಗ, ಅವರು 2024 ರ ಅಕ್ಟೋಬರ್ 25 ರಂದು ಕಾನೂನು ನೋಟೀಸ್ ನೀಡಿದ್ದರು. ತದನಂತರ ಬ್ಯಾಂಕ್ 2024 ರ ನವೆಂಬರ್ 30 ರಂದು ರೂ.2,33,333 ಗಳನ್ನು ಮಾತ್ರ ದೂರುದಾರರ ಖಾತೆಗೆ ಜಮಾ ಮಾಡಿ, ಉಳಿದ ಮೊತ್ತವನ್ನು ಹಿಂತಿರುಗಿಸಿರಲಿಲ್ಲ. ಈ ಕುರಿತು ಗ್ರಾಹಕರು ಶಿವಮೊಗ್ಗ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಆಯೋಗದ ತೀರ್ಪು;

ದೂರುದಾರರು ಸಲ್ಲಿಸಿದ ಪ್ರಮಾಣಪತ್ರ, ದಾಖಲೆಗಳು ಹಾಗೂ ಉಭಯ ಪಕ್ಷಗಳ ವಾದ-ವಿವಾದಗಳನ್ನು ಆಲಿಸಿದ ಆಯೋಗವು ಬ್ಯಾಂಕ್ ಕಡೆಯಿಂದ ಸೇವಾ ನ್ಯೂನತೆಯಾಗಿದೆ ಎಂದು ತೀರ್ಮಾನಿಸಿ, ಭಾಗಶಃ ದೂರು ಪುರಸ್ಕರಿಸಿ ಆ. 14 ರಂದು ಆದೇಶ ಹೊರಡಿಸಿದೆ.

ಬ್ಯಾಂಕ್‌ನಿಂದ ಗ್ರಾಹಕರಿಗೆ ಬರಬೇಕಾದ ಬಾಕಿ ಮೊತ್ತ ರೂ.4,66,667 ಗಳನ್ನು 2024 ರ ಅಕ್ಟೋಬರ್ 25 ರಿಂದ ಅನ್ವಯವಾಗುವಂತೆ ವಾರ್ಷಿಕ ಶೇ. 8 ರಷ್ಟು ಬಡ್ಡಿಯೊಂದಿಗೆ 45 ದಿನಗಳ ಒಳಗೆ ಪಾವತಿಸಬೇಕು.

ನಷ್ಟ ಪರಿಹಾರ: ಮಾನಸಿಕ ಕಿರುಕುಳ ಮತ್ತು ವೇದನೆಗಾಗಿ ರೂ.25,000 ಹಾಗೂ ವ್ಯಾಜ್ಯದ ವೆಚ್ಚವಾಗಿ ರೂ.10,000 ಗಳನ್ನು 45 ದಿನಗಳ ಒಳಗೆ ಪಾವತಿಸತಕ್ಕದ್ದು. ನಿಗದಿತ 45 ದಿನಗಳ ಒಳಗೆ ಮೊತ್ತ ಪಾವತಿಸಲು ವಿಫಲವಾದಲ್ಲಿ, ಸಂಪೂರ್ಣ ಮೊತ್ತಕ್ಕೆ ವಾರ್ಷಿಕ ಶೇ. 10 ರಷ್ಟು ಬಡ್ಡಿ ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡುವುದು ಕಡ್ಡಾಯ.

ಆಯೋಗದ ಅಧ್ಯಕ್ಷ ಟಿ. ಶಿವಣ್ಣ ಮತ್ತು ಸದಸ್ಯ ಬಿ.ಡಿ. ಯೋಗಾನಂದ ಭಾಂಡ್ಯ ಅವರಿದ್ದ ಪೀಠವು ಈ ಆದೇಶ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular