BIG NEWS: ಗಿರಿಜನ ಶಿಕ್ಷಣಕ್ಕಾಗಿ ಏಕಲವ್ಯ ಮಾದರಿ ಶಾಲೆ ಸ್ಥಾಪನೆ; 38,800 ಶಿಕ್ಷಕರ ನೇಮಕ

ನವದೆಹಲಿ: ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ ಗಿರಿಜನ ವಸತಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಂಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ, ಮುಂದಿನ 3 ವರ್ಷಗಳಲ್ಲಿ ದೇಶಾದ್ಯಂತ ಗಿರಿಜನ ಪ್ರದೇಶಗಳಲ್ಲಿ ಏಕಲವ್ಯ ಮಾದರಿ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಏಕಲವ್ಯ ಮಾದರಿ ಶಾಲೆಗಳಿಗಾಗಿ 38,800 ಶಿಕ್ಷಕರು ಹಾಗೂ 740 ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಘೋಷಿಸಿದರು. ಇದರಿಂದ 3.5 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read