ಭಾನುವಾರ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಬಜೆಟ್ ಮಂಡಿಸಿದರು. ಬಜೆಟ್‌ನಲ್ಲಿ ರೈತರಿಗಾಗಿ ಹಲವು ಘೋಷಣೆಗಳನ್ನು ಮಾಡಲಾಗಿದೆ.
ವಿಶೇಷವಾಗಿ ಕೃತಕ ಬುದ್ಧಿಮತ್ತೆ (ಎಐ) ಬಳಕೆ ಮಾಡಿಕೊಂಡು ಕೃಷಿ ಚಟುವಟಿಕೆಗಳನ್ನು ಉತ್ತೇಜಿಸಲಾಗುತ್ತದೆ ಎಂದು ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿದರು. ಇದಕ್ಕಾಗಿ ಎಐ ಟೂಲ್ ಅಭಿವೃದ್ಧಿ ಮಾಡಲಾಗುತ್ತದೆ ಎಂದರು.
ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ರೈತರ ಚಟುವಟಿಕೆಗಳನ್ನು ಉತ್ತೇಜಿಸಲು ಮತ್ತು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ‘ಭಾರತ್ ವಿಸ್ತಾರ್’ (Bharat Vistar) ಎಂಬ ಬಹುಭಾಷಾ AI ಟೂಲ್ ಘೋಷಿಸಿದ್ದಾರೆ.
ಇದು ವಿವಿಧ ಕೃಷಿ ಪೋರ್ಟಲ್‌ಗಳು ಮತ್ತು ಆಧುನಿಕ ಕೃಷಿ ಪದ್ಧತಿಗಳನ್ನು AI ವ್ಯವಸ್ಥೆಯೊಂದಿಗೆ ಸಂಯೋಜಿಸುತ್ತದೆ. ರೈತರಿಗೆ ಬೆಳೆಗಳ ಬಗ್ಗೆ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಮತ್ತು ವೈಯಕ್ತಿಕ ಸಲಹೆಗಳನ್ನು ನೀಡಲಿದೆ.
ಈ ಎಐ ಟೂಲ್ ಭಾಷಾ ಅಡೆತಡೆ ನಿವಾರಣೆ ಮಾಡಲಿದೆ. ಇದಕ್ಕಾಗಿಯೇ ಬಹುಭಾಷಾ ಸೌಲಭ್ಯವನ್ನು ಒದಗಿಸಲಾಗುತ್ತದೆ. ಇರುವುದರಿಂದ ರೈತರು ತಮ್ಮ ಮಾತೃಭಾಷೆಯಲ್ಲೇ ಮಾಹಿತಿಯನ್ನು ಪಡೆಯಬಹುದು.

