ಕಲಬುರಗಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಕೇಂದ್ರ ಬಜೆಟ್ 2026-27 ರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ಬಜೆಟ್ ನಿರಾಶಾದಾಯಕವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಬಜೆಟ್ ನಿರಾಶಾದಾಯಕವಾಗಿದೆ , ಯಾವುದೇ ದೂರದೃಷ್ಟಿಯಿಲ್ಲದ ಬಜೆಟ್. ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಮತ್ತೊಮ್ಮೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದ್ದಾರೆ.
ದಕ್ಷಿಣ ಭಾರಕ್ಕೆ ಏನೂ ಕೊಟ್ಟಿಲ್ಲ. ಬರೀ ಹೇಳಿಕೆ ಅಷ್ಟೇ ಎಂದಿದ್ದಾರೆ. ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ, ಕರ್ನಾಟಕಕ್ಕೆ ಬರೀ ಚೊಂಬು ಕೊಟ್ಟಿದ್ದಾರೆ. ಇದು ಯಾವುದೇ ದೂರದೃಷ್ಟಿಯಿಲ್ಲದ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರದ ಬಜೆಟ್ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

