BREAKING NEWS: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ವಿತ್ತ ಸಚಿವೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಮೊದಲ ಬಾರಿ ಉದ್ಯೋಗ ಹುಡುಕುವವರಿಗೆ ದೊಡ್ಡ ಸಹಾಯ ಸಿಗಲಿದೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದರ ಗರಿಷ್ಠ ಮೊತ್ತ 15,000 ರೂ. ಇಪಿಎಫ್ ಒ ನಲ್ಲಿ ನೊಂದಾಯಿಸಲ್ಪಟ್ಟವರು ಈ ಭತ್ಯೆ ಪಡೆಯಲಿದ್ದಾರೆ. ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read