ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ದಾಖಲೆಯ 9ನೇ ಬಾರಿಗೆ ಆಯವ್ಯಯ ಮಂಡಿಸಲಿದ್ದಾರೆ. ದೇಶದ ಜನರ ಚಿತ್ತ ಕೇಂದ್ರ ಬಜೆಟ್ ನತ್ತ ನೆಟ್ಟಿದೆ. ನಿರೀಕ್ಷೆಗಳಂತು ಬೆಟ್ಟದಷ್ಟಿದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಳಿಗ್ಗೆ ಹಣಕಾಸು ಇಲಾಖೆಯಿಂದ ಬಜೆಟ್ ಟ್ಯಾಬ್ ನ್ನು ಪಡೆದುಕೊಂಡರು. ಬಳಿಕ ಬಜೆಟ್ ಮಂಡನೆಗೆ ಅನುಮತಿ ಪಡೆಯಲು ರಾಷ್ಟ್ರಪತಿ ಭವನಕ್ಕೆ ತೆರಳಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಬಜೆಟ್ ಮಂಡನೆಗೆ ಅನುಮತಿ ಪಡೆದರು. ಈ ವೇಳೆ ರಾಷ್ಟ್ರಪತಿ ಮುರ್ಮು ಬಜೆಟ್ ಮಂಡನೆಗೆ ವಿತ್ತ ಸಚಿವರಿಗೆ ಸಿಹಿ ತಿನ್ನಿಸಿ ಶುಭಕೋರಿದರು. ಬಳಿಕ ಸಂಸತ್ ಭವನಕ್ಕೆ ತೆರಳಿದ್ದಾರೆ.
ದೇಶದ ಮೊದಲ ಮಹಿಳಾ ಹಣಕಾಸು ಸಚಿವೆಯಾಗಿ ಇತಿಹಾಸ ನಿರ್ಮಿಸಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಇದು ಒಂಬತ್ತನೇ ಬಜೆಟ್ ಆಗಿದ್ದು, ಮಹತ್ವದ ದಾಖಲೆಯನ್ನು ನಿರ್ಮಿಸಲಿದ್ದಾರೆ.

