HomeIndiaBUDGET BREAKING: ಕೇಂದ್ರ ಬಜೆಟ್ ಮಂಡನೆ ಆರಂಭ

BUDGET BREAKING: ಕೇಂದ್ರ ಬಜೆಟ್ ಮಂಡನೆ ಆರಂಭ

ನವದೆಹಲಿ: 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದೆ. ಲೋಕಸಭೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸತತ 9ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಬಜೆಟ್ ಮಂಡನೆ ಆರಂಭಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಇದು ಅಭಿವೃದ್ಧಿ ಹೊಂದಿದ ಭಾರತದ ಬಜೆಟ್ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎಂದರು.

ಎಲ್ಲಾ ವರ್ಗದವರಿಗಾಗಿ ಬಜೆಟ್ ಸಿದ್ಧಪಡಿಸಲಾಗಿದೆ. ವಿಕಸಿತ ಭಾರತದ ಗುರಿ ಸಾಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಇದೇ ವೇಳೆ ದೇಶದ ಜನತೆಗೆ ಮಾಘ ಪೂರ್ಣಿಮಾ, ರವಿದಾಸ್ ಜಯಂತಿಯ ಶುಭ ಕೋರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular