ನವದೆಹಲಿ: 2026-27ನೇ ಸಾಲಿನ ಕೇಂದ್ರ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದೆ. ಕೇಂದ್ರ ಸಚಿವ ಸಂಪುಟ ಸಭೆ ಬಜೆಟ್ ಮಂಡನೆಗೆ ಸಮ್ಮತಿ ಸೂಚಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಸತ್ ಭವನದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಒಪ್ಪಿಗೆ ನೀಡಲಾಯಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಜೆಟ್ ಮಂಡನೆಗೆ ಒಪ್ಪಿಗೆ ಪಡೆದಿದ್ದಾರೆ.
ಈ ವೇಳೆ ವಿದೇಶಾಂಗ ಸಚಿವ ಎಸ್. ಜೈಶಂಕರ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಕಿರಣ್ ರಿಜಿಜು, ರಾಮ್ ಮೋಹನ್ ನಾಯ್ಡು ಮತ್ತು ಜಿ. ಕಿಶನ್ ರೆಡ್ಡಿ ಉಪಸ್ಥಿತರಿದ್ದರು.
ಕೆಲವೇ ಕ್ಷಣಗಳಲ್ಲಿ ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಸತತ 9ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ಬಎಟ್ ಇದಾಗಿದ್ದು, ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿದೆ.

